ರಸ್ತೆ ಅಪಘಾತ : ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಲಕ್ಷ್ಮಣ ಸವದಿ

ಅಥಣಿ : ಮಾ.2:ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಲು ಸಹಾಯ ಮಾಡಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮಾನವೀಯತೆ ಮೆರೆದಿದ್ದಾರೆ.
ತಾಲೂಕಿನ ಹಲ್ಯಾಳ ಗ್ರಾಮದ ಸಮೀಪದ ಗೋಕಾಕ್-ಅಥಣಿ ರಸ್ತೆಯಲ್ಲಿ ತಡರಾತ್ರಿ ಅಪರಿಚಿತ ವಾಹನ ಬೈಕ್ ಸವಾರಿಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಅಡಹಳಟ್ಟಿ ಗ್ರಾಮದ ಓರ್ವರು ಗಂಭೀರವಾಗಿ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ಲಕ್ಷ್ಮಣ ಸವದಿ ಅವರು ಆಗಮಿಸುತ್ತಿದ್ದರು.
ಗಾಯಗೊಂಡ ವ್ಯಕ್ತಿಯನ್ನು ನೋಡಿ ಘಟನಾ ಸ್ಥಳಕ್ಕೆ ಆಗಮಿಸಿದ ಅವರು ಅಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆರೋಗ್ಯ ಸಂಚಾರಿ ವಾಹನ ಬರುವವರಿಗೆ ಕಾದು ನಿಂತು ಅಥಣಿ ಸಮುದಾಯ ಆಸ್ಪತ್ರೆಗೆ ಗಾಯಾಳುವನ್ನು ರವಾನಿಸಿದ್ದಾರೆ. ಸವದಿ ಅವರು ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.