ರಸ್ತೆ ಅಪಘಾತ ನಾಲ್ವರ ಸಾವು

ದೆಹಲಿ,ಜು.೧೩- ತಡರಾತ್ರಿ ದೆಹಲಿಯಲ್ಲಿ ಎರಡು ವಾಹನಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ
ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ ಹಲವಾರು ಜನ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ.
ಅಲಿಪುರ ರಸ್ತೆಯಲ್ಲಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ವಾಹನವು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದ ನಂತರ ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಘಟನೆ ಕುರಿತು ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.