ರಸ್ತೆ ಅಪಘಾತ: ವೈದ್ಯೆ ಮೃತ್ಯು 

ಮಂಗಳೂರು, ಸೆ.೧೪- ಪುಣೆಯ ಪಿಂಪ್ರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲ್ಯದ ವೈದ್ಯೆಯೊಬ್ಬರು ಮೃತಪಟ್ಟ ಘಟನೆ ಸೆ.೧೨ರಂದು ನಡೆದಿದೆ. 

ಪುಣೆಯ ಪಿಂಪ್ರಿಯಲ್ಲಿ ದಂತ ವೈದ್ಯೆಯಾಗಿದ್ದ ಮೂಲತಃ ಮಂಗಳೂರಿನ ವೆಲೆನ್ಸಿಯ ನಿವಾಸಿ, ಜಿಶಾ ಜೋನ್‌ (27)  ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸ್ಕೂಟರ್‌ನಲ್ಲಿ ಮನೆಗೆ ಹಿಂತಿರುಗುವ ವೇಳೆ ಸ್ಕೂಟರ್‌ಗೆ ಟ್ರಕ್ ಢಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರು ಸಾವನ್ನಪ್ಪಿದರು. ಜಿಶಾ ಅವರ ಪತಿ ಪುಣೆಯಲ್ಲಿ ಉದ್ಯಮಿಯಾಗಿದ್ದಾರೆ. ಮೃತ ಜಿಶಾ ಅವರು ಪತಿ, ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.