ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹುಬ್ಬಳ್ಳಿ,ನ23: ಉತ್ತರ ಕರ್ನಾಟಕದಲ್ಲೇ ಅತಿ ಹೆಚ್ಚು ಸ್ಲಂ ಪ್ರದೇಶ ಹೊಂದಿರುವ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನ ಸಭಾ ಕ್ಷೇತ್ರದಲ್ಲಿ ನೂರಾರು ಕೋಟಿ ರೂ. ಅನುದಾನ ತರುವ ಮೂಲಕ ಕ್ಷೇತ್ರದ ಚಿತ್ರಣವೇ ಬದಲಿಸಲಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಅವರು ಹೇಳಿದರು.
ಅವರು, 7ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ಇಲ್ಲಿನ ಸೆಟ್ಲಮೆಂಟ್‍ನ ಗಂಗಾಧರ ನಗರ-ಬಿಡನಾಳ ಮುಖ್ಯ ರಸ್ತೆಯ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಕಳೆದ 10ವರ್ಷದ ಅವಧಿಯಲ್ಲಿ ಕ್ಷೇತ್ರದ ಚಿತ್ರಣವೇ ಬದಲಾಗುವಂತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಒಳಚರಂಡಿ, ತೆರೆದ ಚರಂಡಿ, ಸಿಸಿ ರಸ್ತೆ, ನಾಲಾ ಅಭಿವೃದ್ಧಿ, ಶಾಲೆಗಳ ಅಭಿವೃದ್ಧಿ, ಸಮುದಾಯ ಭವನಗಳ ನಿರ್ಮಾಣ, ಆಸ್ಪತ್ರೆ ನಿರ್ಮಾಣ ಮತ್ತು ಅತೀ ಹೆಚ್ಚು ಪ್ರಮಾಣದಲ್ಲಿ ರಸ್ತೆಗಳನ್ನ ಅಭಿವೃದ್ಧಿ ಪಡಿಸಲಾಗಿದೆ. ಇಂದಿಗೂ ಅಭಿವೃದ್ಧಿ ಕಾರ್ಯಗಳು ನೆಡೆಯುತ್ತಲೇ ಇವೆ ಎಂದರು.
ಇಂದು ಒಂದೇ ದಿನ ಇಲ್ಲಿನ ಮಂಟೂರ ರಸ್ತೆಯಲ್ಲಿ 1.75 ಕೋಟಿ ರೂ. ವೆಚ್ಚದಲ್ಲಿ ಸ್ಮಶಾನ ಅಭಿವೃದ್ಧಿ ಕಾಮಗಾರಿ ಮತ್ತು 1.25(ಪ್ಯಾಕೇಜ್)ಕೋಟಿ ರೂ. ವೆಚ್ಚದಲ್ಲಿ ಒಳಚರಂಡಿ ಮತ್ತು 7 ಕೋಟಿ ರೂ. ವೆಚ್ಚದಲ್ಲಿ ಉತ್ತಮ ಗುಣಮಟ್ಟದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
ಚುನಾವಣೆ ಬಂದಾಗ ಮಾತ್ರ ನಾನು ಜನರ ಬಳಿ ಬರುವುದಿಲ್ಲ. ಒರ್ಷದ ಒಂದು ದಿನವು ವಿಶ್ರಮಿಸದೇ ಸದಾ ಕ್ಷೇತ್ರದ ಜನರೊಂದಿಗೆ ಇರುತ್ತೇನೆ. ಕ್ಷೇತ್ರದ ಜನರು ಕೂಡ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ ಯಾವತ್ತೂ ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಜನರ ಬೆಂಬಲವೇ ಕ್ಷೇತ್ರದ ಅಭಿವೃದ್ಧಿಗೆ ಪ್ರೇರಣೆಯಾಗಿದೆ ಎಂದು ಹೇಳಿದರು.
ಈ ಸಂದಂರ್ಭದಲ್ಲಿ ಕೆಪಿಸಿಸಿ ಸದಸ್ಯರು, ಪಾಲಿಕೆ ಮಾಜಿ ಸದಸ್ಯರಾದ ಮೋಹನ್ ಅಸುಂಡಿ, ಮುಖಂಡರಾದ ಶಾಮ ಜಾಧವ, ಶಿವನಗೌಡ ಹೊಸಮನಿ, ಯಮನೂರ ಜಾಧವ, ಸಿದ್ದಪ್ಪಣ್ಣ ಮೇಟಿ, ಪರುತಪ್ಪ ಬಳಗಣ್ಣವರ, ಫಯಾಜ್ ಸೇರಿದಂತೆ ಮೊದಲಾದವರು ಇದ್ದರು.