ರಸ್ತೆ ಕಳಪೆ ಕಾಮಗಾರಿ: ಕ್ರಮಕ್ಕೆ ಒತ್ತಾಯ

ರಾಯಚೂರು, ನ ೧೮- ದೇವದುರ್ಗ ತಾಲೂಕಿನ ಸಂಕೇಶ್ವರಹಾಳ ಮುಖ್ಯರಸ್ತೆಯಿಂದ ಹಿರೇಬೂದೂರು ಮಾರ್ಗವಾಗಿ ಗೂಗಲ್ ಗೆ ಹೋಗುವ ಡಾಂಬರೀಕರಣ ರಸ್ತೆ ಕಾಮಗಾರಿ ನಡೆಯುತ್ತಿದ್ದು ರಸ್ತೆಗಳ ನಿರ್ಮಾಣ ಸಿ.ಡಿ ಮತ್ತು ಬಿಡ್ಜ್ ಗಳು ಕಳಪೆ ಮಟ್ಟದಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ದಲಿತ ಸಂಘಟನೆಗಳ ಒಕ್ಕೂಟ ಕಲ್ಯಾಣ ಕರ್ನಾಟಕ ಸಮಿತಿವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕೆಂಗಲ್ ಅವರು ಕಳಪೆ ರಸ್ತೆ ಕಾಮಗಾರಿ ಕುರಿತು ತಾಶೀಲ್ದಾರ್ ಮತ್ತು ಕಾರ್ಯನಿರ್ವಾಹಕ ಅಭಿಯಂತರ ರಿಗೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಅವರ ನಿರ್ಲಕ್ಷದಿಂದ ಕಾಮಗಾರಿಗಳು ಸಂಪೂರ್ಣವಾಗಿ ಕಳಪೆಯಾಗಿವೆ. ಈ ಕೂಡಲೇ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ಕರೆದು ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಸಮಿತಿಯ ರಾಜ್ಯಾಧ್ಯಕ್ಷ ಭೀಮಶಂಕರ್ ಯರಮಸಾಳ, ಗ್ರಾಮಸ್ಥರ ಖಾಸಿಂಸಾಬ್ ಸೇರಿದಂತೆ ಇತರರು ಇದ್ದರು.