ರಾಯಚೂರು,ಜೂ.೭ – ಅಪರಾಧ ನಿಯಂತ್ರಣ ಪುಂಡರಿಗೆ ದಂಡ ಬಿಸುವುದು ಅಷ್ಟೇ ಪೊಲೀಸರ ಕೆಲಸ ಎಂದು ನಾವು ಅಂದುಕೊಂಡಿದ್ದರೆ ಅದು ತಪ್ಪು ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚುವ ಮೂಲಕ ಜನ ಸಾಮಾನ್ಯರ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟು ನನ್ನ ಹೆಮ್ಮಯ ರಾಯಚೂರು ಪೊಲೀಸರು ವಿಚಾರಕ್ಕೂ ಸಹ ಕಾರಣರಾಗಿದ್ದಾರೆ.
ಈ ಘಟನೆ ಏನಂತೀರಾ:
ನಗರದ ಶಂಶಾಲಂ ದರ್ಗದ ಹತ್ತಿರ ಮುಖ್ಯರಸ್ತೆಯಲ್ಲಿ ಗುಂಡಿ ಬಿದ್ದಿರುವುದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಆಗಿತ್ತು.ಸಂಚಾರ ಪೊಲೀಸರು ಸಮವಸ್ತ್ರದಲ್ಲೇ ಗುಂಡಿಗಳನ್ನು ಮುಚ್ಚುವ ಮೂಲಕ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಲೋಕೋಪಯೋಗಿ ಇಲಾಖೆ ಮಾಡಬೇಕಾದ ಕೆಲಸವನ್ನು ಸಂಚಾರ ಪೊಲೀಸರು ಮಾಡುವ ಮೂಲಕ ಜನ ಮೆಚ್ಚುಗೆಗೆ ಕಾರಣರಾಗಿದ್ದಾರೆ.
ಈಗಾಗಲೇ ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ರಸ್ತೆ ಗುಂಡಿಗಳನ್ನು ಮುಚ್ಚುವ ಮೂಲಕ ಸಂಬಂಧಪಟ್ಟ ಇಲಾಖೆ ಅಲಕ್ಷ್ಯಕ್ಕೂ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.
ರಸ್ತೆ ಗುಂಡಿಗಳಿಂದ ಸಂಜೆ ರಾತ್ರಿ ವೇಳೆ ಸಂಚಾರ ನಿರ್ವಹಣೆ ಬಹಳ ಕಷ್ಟವಾಗುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಸಂಬಂಧಿಸಿದ ಇಲಾಖೆಗಳ ಮೇಲೆ ಅವಲಂಬಿತವಾಗದೆ ನಾವೇ ಕಾರ್ಯೋನ್ಮುಖರಾಗಿದ್ದೇವೆ ಎಂದು ಸಂಚಾರ ಪೊಲೀಸರು ತಿಸಿದ್ದಾರೆ.
ಬಾಕ್ಸ್
ನಗರದಲ್ಲಿ ಹಲವಾರು ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದು ಕಣ್ಣಿಗೆ ಬೀಳುತ್ತಿದ್ದರು, ಅದನ್ನು ಸರಿಪಡಿಸುವ ಕಾರ್ಯ ಮಾತ್ರ ಸ