ರಸ್ತೆ ದಾಟುತ್ತಿದ್ದ ಯುವಕನಿಗೆ ಸಾರಿಗೆ ಬಸ್ ಡಿಕ್ಕಿ : ಯುವಕನ ಸಾವು

ಕಲಬುರಗಿ:ಮಾ.26: ರಸ್ತೆ ದಾಟುತ್ತಿದ್ದ ಯುವಕನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಶಹಾಬಾದ ತಾಲೂಕಿನ ಮಾಲಗತ್ತಿ ಗ್ರಾಮದ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಾಲಗತ್ತಿ ಗ್ರಾಮದ ನಿವಾಸಿ ವೀರೇಶ ಮಲಕಪ್ಪ ಹೊನ್ನಕ್ಕ (23) ಮೃತ ಯುವಕ. ಯುವಕ ರಾಜ್ಯ ಹೆದ್ದಾರಿ ರಸ್ತೆ ದಾಟುತ್ತಿದ್ದ ವೇಳೆ ಕೆಕೆಆರಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೆ ಮೃತ ಪಟ್ಟಿದ್ದಾನೆ. ಸ್ಥಳಕ್ಕೆ ಶಹಾಬಾದ ನಗರ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ,ಸಾರಿಗೆ ಬಸ್ ಪೆÇಲೀಸರ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.