ರಸ್ತೆ ದುರಸ್ತಿಗಾಗಿ ನಿವೃತ್ತ ನೌಕರನ ವಿನೂತನ ಪ್ರತಿಭಟನೆ

ಕೋಲಾರ,ಸೆ.೯-ರಸ್ತೆ ಗುಂಡಿಗಳನ್ನು ದುರಸ್ತಿ ಮಾಡುವಂತೆ ಒತ್ತಾಯಿಸಿ ಇಂದು ಬೆಳಿಗ್ಗೆ ನಿವೃತ್ತ ಸರ್ಕಾರಿ ನೌಕರರೊಬ್ಬರು ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದ ಘಟನೆ ನಗರದಲ್ಲಿ ನಡೆಯಿತು.
ನಗರದ ಗಾಂಧಿ ನಗರ ಮಾರ್ಗವಾಗಿ ಕೋಲಾರಮ್ಮನ ಕೆರೆ ಕಟ್ಟೆಯ ಬಳಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಗುಂಡಿಗಳಿಂದ ಕೂಡಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
ಇದರಿಂದ ಬೇಸತ್ತ ನಿವೃತ್ತ ಸರ್ಕಾರಿ ನೌಕರ ನಾಗರಾಜ್ ಎಂಬುವರು ರಸ್ತೆ ಮಧ್ಯದಲ್ಲಿ ಕುಳಿತು ಏಕಾಂಗಿ ಪ್ರತಿಭಟನೆ ನಡೆಸಿದರು.ರಸ್ತೆ ಗುಂಡಿ ಸಮೀಪ ಕುಳಿತು ನಿವೃತ್ತ ಸರ್ಕಾರಿ ನೌಕರನಿಂದ ಏಕಾಂಗಿ ಪ್ರತಿಭಟನೆನಿರಂತರ ಮಳೆಯಿಂದ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ನಿರ್ಮಾಣವಾಗಿವೆ.
ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಹಲವು ಬಾರಿ ಮನವಿ ನೀಡಿದರೂ ಸ್ಪಂದಿಸದೇ ಇರುವುದಕ್ಕೆ ಈ ರೀತಿಯ ಪ್ರತಿಭಟನೆಗೆ ಮುಂದಾಗಿರುವುದಾಗಿ ಅವರು ಹೇಳಿದರು.