ರಸ್ತೆ ದುರಸ್ತಿಗೆ ಆಗ್ರಹಿಸಿ ಕರ್ನಾಟಕ ಜನಸೈನ್ಯ ಒತ್ತಾಯ

ರಾಯಚೂರು,ಜು.೨೯- ತಾಲೂಕಿನ ಕಾಡ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ರೈಲ್ವೆ ಟ್ರ್ಯಾಕ್‌ನಿಂದ ಬೇವಿನಬೆಂಚಿ ಗ್ರಾಮಕ್ಕೆ ಹೋಗುವ ರಸ್ತೆ ತಗ್ಗು ಗುಂಡಿಗಳು ಬಿದ್ದು ಸಂಪರ್ಕ ತೀರಾ ಹದಗೆಟ್ಟಿದ್ದು ಕೂಡಲೇ ದುರಸ್ತಿ ಗೊಳಿಸಲು ಒತ್ತಾಯಿಸಿ ಕರ್ನಾಟಕ ಜನಸೈನ್ಯ ಮುಖಂಡರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ತಾಲೂಕಿನ ಕಾಡ್ಲೂರು ಗ್ರಾಮ ಪಂಚಾಯತ್ ವ್ಯಾಪಿಗೆ ಬರುವ ರೈಲ್ವೆ ಟ್ರ್ಯಾಕ್‌ನಿಂದ ಬೇವಿನಬೆಂಚಿ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದೆ.ಈ ರಸ್ತೆಯಲ್ಲಿ ಸುಮಾರು ೩ ವರ್ಷದಿಂದ ತಗ್ಗು ಗುಂಡಿಗಳು ಬಿದ್ದು ವಾಹನಗಳು ಪಲ್ಟಿಯಾಗಿ ಅನೇಕ ಸವಾರರು ಗಾಯಗೊಂಡಿದ್ದಾರೆ ಎಂದು ದೂರಿದರು.ರಾತ್ರಿಯ ಸಮಯದಲ್ಲಿ ಸಂಚಾರ ಮಾಡುವಂತಹ ದ್ವಿ – ಚಕ್ರ ವಾಹನಗಳು ನಡುವೆ ಡಿಕ್ಕಿ ಹೊಡೆದು ಅಪಘಾತಗಳು ಸಂಭವಿಸುತ್ತವೆ. ಗರ್ಭಿಣಿ ಸ್ತ್ರೀಯರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಹೋಗುವ ಸಮಯದಲ್ಲಿ ರಸ್ತೆ ಹದಗೆಟ್ಟಿರುವದರಿಂದ ನಿಧಾನವಾಗಿ ಹೋಗುವ ಪರಿಸ್ಥಿತಿಯಲ್ಲಿ ಗರ್ಭಿಣಿಯರಿಗೆ ಹೆರಿಗೆಯ ಸಂದರ್ಭದಲ್ಲಿ ತುಂಬಾ ಕಷ್ಟವನ್ನು ಅನುಭವಿಸುತ್ತಿದ್ದಾರೆ.ಈ ಹಿಂದೆ ಗ್ರಾಮಸ್ಥರು ಹದಗೆಟ್ಟಿರುವ ರಸ್ತೆಯನ್ನು ದುರಸ್ತಿ ಮಾಡಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ದೂರನ್ನು ಸಲ್ಲಿಸಿದರು ಯಾವುದೇ ಕ್ರಮ ಕೈಗೊಂಡಿಲ್ಲ ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ೧೫ ದಿನಗಳ ಒಳಗಾಗಿ ಹದಗೆಟ್ಟಿರುವ ರಸ್ತೆಯನ್ನು ಕೂಡಲೇ ದುರಸ್ತಿಗೊಳಿಸಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಂ.ರಮೇಶ್,ವೆಂಕಟೇಶ್, ನಿಶಾಂತ ಕುಮಾರ,ಎಸ್.ವೆಂಕಟೇಶ್,ಸತ್ಯರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.