ರಸ್ತೆ ಪುನರ್ ನಿರ್ಮಾಣಕ್ಕೆ ಲಿಂಬಾವಳಿ ಸೂಚನೆ

ಕೆಆರ್ ಪುರ, ನ.೨೫- ಮಳೆಯ ಪರಿಣಾಮದಿಂದಾಗಿ ಅಭಿವೃದ್ಧಿ ಕಾಮಗಾರಿ ಕುಂಠಿತವಾಗಿದ್ದು ,ಮಳೆಯಿಂದ ಹದಗೆಟ್ಟ ರಸ್ತೆಗಳ ಪುನರ್‌ನಿರ್ಮಾಣ ಮಾಡಲು ಅಧಿಕಾರಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.
ಮಹದೇವಪುರ ಕ್ಷೇತ್ರದ ಬೆಳ್ಳಂದೂರು ಹಾಗೂ ಹೂಡಿ ವಾರ್ಡ್ ಗಳ ವ್ಯಾಪ್ತಿಯಲ್ಲಿ ಬೆಸ್ಕಾಂ ಅಂಡರ್ ಗ್ರೌಂಡ್ ಕೇಬಲ್ ಕಾಮಗಾರಿಯಿಂದ ಹದಗೆಟ್ಟ ರಸ್ತೆಗಳ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಹವಾಮಾನ ವೈಪರೀತ್ಯದಿಂದ ನಗರದಲ್ಲಿ ಮಳೆ ಆರಂಭವಾಗಿದ್ದು, ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅಡ್ಡಿಯಾಗಿದೆ. ತಕ್ಷಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಆರಂಭಿಸಿ , ಶೀಘ್ರವೇ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ತಿಳಿ ಹೇಳಿದರು .
ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಮನೋಹರ್ ರೆಡ್ಡಿ, ಮುಖಂಡರಾದ ಜಯಚಂದ್ರರೆಡ್ಡಿ, ಬೆಳ್ಳಂದೂರು ಸುರೇಶ್,ಮಿಥುನ್ ರೆಡ್ಡಿ, ಹೂಡಿ ಪಿಳ್ಳಪ್ಪ, ಬಿಬಿಎಂಪಿ ಇಇ ಮುನಿರೆಡ್ಡಿ, ಇದ್ದರು.