ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ನಾಲ್ವರು ಸಾವು

ಶ್ರೀ ಗಂಗಾನಗರ (ರಾಜಸ್ಥಾನ),ನ.7-ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಒಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶ್ರೀ ಗಂಗಾ ನಗರದಲ್ಲಿ ನಡೆದಿದೆ.
ಜಿತೇಂದ್ರ (25), ಅಂಕುಶ್ (23), ಸಾಹಿಲ್ ಜುನೇಜಾ (22) ಮತ್ತು ರೋಹಿತ್ (23) ಮೃತಪಟ್ಟವರು.ಗಾಯಗೊಂಡ ವಾಸಿಂ ಅಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅನುಪ್‌ಗಢ್ ಪಟ್ಟಣದಲ್ಲಿ ಹುಟ್ಟುಹಬ್ಬದ ಪ್ರಯುಕ್ತ ಪಾರ್ಟಿ ಮಾಡಿ, ಹಿಂತಿರುಗುತ್ತಿದ್ದಾಗ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗ್ಯಾಸ್ ಕಟ್ಟರ್‌ಗಳ ಸಹಾಯದಿಂದ ಕಾರಿನ ಒಳಗೆ ಸಿಲುಕಿದ ಮೃತ ದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ನಾಲ್ಕು ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಅಪಘಾತದ ಬಗ್ಗೆ ತನಿಖೆ ಆರಂಭಿಸಿದ್ದಾರೆ.