ರಾಗಲಪರ್ವಿ ಪಿಡಿಓ ಮೇಲೆ ಹಲ್ಲೆ ಬಂಧನ-ಖಂಡನೆ

ಸಿಂಧನೂರು.ಆ.೩೦- ರಾಗಲಪರ್ವಿ ಗ್ರಾಮ ಪಂಚಾಯಿತಿಯ ಪಿಡಿಓ ಮೇಲೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ರೊಬ್ಬರು ಹಲ್ಲೆ ಮಾಡಿಧ್ಧು ಅಧಿಕಾರಿ ನೀಡಿದ ದೂರಿನ ಮೇರೆಗೆ ಹಲ್ಲೆ ಮಾಡಿದ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.
ತಾಲ್ಲೂಕಿನ ರಾಗಲಪರ್ವಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಪ್ರಕಾಶ ಪಾಟೀಲ ನಾಯಕ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಅಲ್ಲಿಗೆ ಬಂದ ಗ್ರಾಮ ಪಂಚಾಯಿತಿ ಸದಸ್ಯ ಚನ್ನಬಸವ ತಂದೆ ದೊಡ್ಡ ನಗೌಡ ವಲ್ಕಂಧಿನ್ನಿ ಪಿಡಿಓ ಮೇಲೆ ಹಲ್ಲೆ ಮಾಡಿ ಈಗ ಬಂಧನಕ್ಕೆ ಒಳಗಾಗಿದ್ದಾನೆ.
ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಸದಸ್ಯ ಚನ್ನಬಸವ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿ ಜೀವ ಬೆದರಿಕೆ.
ಹಾಕಿದ್ದು ಪಿಡಿಓ ನೀಡಿದ ದೂರಿನ ಮೇರೆಗೆ ಬಳಗಾನೂರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಚನ್ನಬಸವ ನನ್ನು ಬಂದಿಸಿದ್ದಾರೆ.