ರಾಗಿ ಮಾಲ್ಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ


ಸಂಜೆವಾಣಿ ವಾರ್ತೆ
ಹೂವಿನಹಡಗಲಿ: ಪಟ್ಟಣದ ತುಂಗಭದ್ರಾ ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆ, ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಸಹಯೋಗದಲ್ಲಿ
ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಪೂಜಾರ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ, ಹಾಜರಾತಿ ಹೆಚ್ಚಿಸಲು ಮತ್ತು ಮಕ್ಕಳ ಆರೋಗ್ಯ ಕಾಪಾಡುವ ದಿಸೆಯಲ್ಲಿ ಸರ್ಕಾರ ವಿನೂತನ ಕಾರ್ಯಕ್ರಮ ಜಾರಿಗೊಳಿಸಿದೆ. ಬೆಳೆಯುವ ಮಕ್ಕಳಿಗೆ ಬೇಕಾದ ಅಗತ್ಯ ಪೋಷಕಾಂಶ, ರೋಗ ನಿರೋಧಕ ಶಕ್ತಿ ಹೆಚ್ಚಿಸಲು ರಾಗಿ ಮಾಲ್ಟ್ ಉಪಯುಕ್ತವಾಗಿದೆ ಎಂದು ಹೇಳಿದರು.
ತುಂಗಭದ್ರಾ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಡಾ. ಎಂ. ಧರ್ಮಣ್ಣ, ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಉತ್ತಮ ಕಾರ್ಯಕ್ರಮವಾಗಿದ್ದು, ಶಿಕ್ಷಕರು, ಅಡುಗೆ ಸಿಬ್ಬಂದಿ ಈ ಯೋಜನೆಯನ್ನು ಉತ್ತಮವಾಗಿ ಜಾರಿಗೊಳಿಸಬೇಕು ಎಂದು ತಿಳಿಸಿದರು.
ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಎಚ್.ಮಲ್ಲಿಕಾರ್ಜುನ, ಸಿಆರ್ ಪಿ ಚನ್ನವೀರನಗೌಡ, ಮುಖ್ಯ ಶಿಕ್ಷಕ ಸುರೇಶ ಅಂಗಡಿ ಉಪಸ್ಥಿತರಿದ್ದರು. ಶಿಕ್ಷಕರಾದ ಕೆ.ಬಸವರಾಜ, ಎಸ್.ದ್ವಾರಕೀಶ್ ರೆಡ್ಡಿ, ಆರ್.ಸ್ವಾಮಿನಾಥ, ಜಿ.ಆನಂದ, ಪಿ.ಎಂ.ಗೀತಾ, ಎನ್.ಪ್ರತಿಮಾ, ಜಯಮ್ಮ, ರೇಖಾ, ಎಸ್.ಸಂಗಮೇಶ ಸುಂಕದ ಪ್ರಸಾದ್,  ಸಂತೋಷ್ ಕುಮಾರ್ ಇದ್ದರು. ಚಿತ್ರಕಲಾ ಸ್ಪರ್ಧೆಯಲ್ಲಿ ಸಾಧನೆಗೈದ ಈಟಿ ಸುಪ್ರಿಯಾ ಅವರಿಗೆ ಸ್ಮರಣಿಕೆ ನೀಡಲಾಯಿತು.