
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಜು.07: ಮಕ್ಕಳಲ್ಲಿ ಸಾಂಸ್ಕೃತಿಕ ಆಸಕ್ತಿ ಹೆಚ್ಚಿಸಲು ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳಲ್ಲಿ ಸಾಂಸ್ಕೃತಿಕ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಪ್ರತಿ ತಿಂಗಳು ದತ್ತು ತೆಗೆದುಕೊಂಡು. ತರಬೇತಿ ಮತ್ತು ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಿದೆಂದು ರಾಘವ ಅಸೋಸಿಯೇಷನ್ ಗೌರವ ಅಧ್ಯಕ್ಷ ಕೆ.ಚೆನ್ನಪ್ಪ ಹೇಳಿದ್ದಾರೆ.
ಅವರಿಂದು ರಾಘವ ಕಲಾಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ. ಮಕ್ಕಳಲ್ಲಿ ಸಾಂಸ್ಕೃತಿಕ ಶಿಕ್ಷಣ ನೀಡುವುದರ ಜೊತೆಗೆ ರಾಘವರ ಬಗ್ಗೆ ಪರಿಚಯಿಸುವ ಕೆಲಸ ಮಾಡಲಿದೆಂದರು.
ಅಸೋಸಿಯೇಷನ್ ಅಧ್ಯಕ್ಷ ಕೆ.ಕೋಟೇಶ್ವರ ರಾವ್ ಮತ್ತು ಕಾರ್ಯದರ್ಶಿ ಪ್ರಕಾಶ್ ಮಾತನಾಡಿ, ನಗರ ಶಾಸಕರು 25 ಲಕ್ಷ ರೂ ನೆರವು ನೀಡುವುದಾಗಿ ಭರವಶೆ ನೀಡಿದ್ದಾರೆ. ನೀಡಿದರೆ ರಾಘವ ಕಲಾ ಮಂದಿರದ ವೇದಿಕೆಯನ್ನು ಸುಸಜ್ಜಿತವಾಗಿ ನಿರ್ಮಿಸುವ ಕುರಿತು ಚಿಂತನೆ ನಡೆಸಲಿದೆಂದು ತಿಳಿಸಿದರು.
ಅಸೋಸಿಯೇಷನ್ ತನ್ನ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಕಳೆದ ಒಂದು ವರ್ಷದಿಂದ ಪ್ರತಿ ತಿಂಗಳು ಒಂದು ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುತ್ತ, ನೃತ್ಯ, ಸಂಗೀತ, ನಾಟಕ ಪ್ರದರ್ಶನಗಳು ಹಮ್ಮಿಕೊಂಡ ಬಗ್ಗೆ ತೆಳಿಸಿದರು.
ಅಸೋಸಿಯೇಷನ್ ನ, ಎನ್.ಬಸವರಾಜ್, ಎಂ. ರಾಮಾಂಜಿನೇಯಲು, ರಮೇಶಗೌಡ ಪಾಟೀಲ್, ರಮಣಪ್ಪ ಭಜಂತ್ರಿ ಮೊದಲಾದವರು ಇದ್ದರು.