ರಾಜಕಾರಣಕ್ಕೆ ಸೋನಿಯಾ ವಿದಾಯ

ರಾಯ್‌ಪುರ (ಛತ್ತೀಸ್ ಘಡ), ಫೆ. ೨೫- ಕಾಂಗ್ರೆಸ್ ನ ಯುವರಾಜ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ದಿನವೇ ನನ್ನ ರಾಜಕೀಯ ಅಂತ್ಯಗೊಂಡಿತು ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಹೇಳುವ ಮೂಲಕ ಸಕ್ರಿಯ ರಾಜಕಾರಣದಿಂದ ನಿವೃತ್ತಿ ನಿರ್ಧಾರದಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಅಚ್ಚರಿ ಮೂಡಿಸಿದ್ದಾರೆ.
ಇದೇ ವೇಳೆ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹಿಮ್ಮೆಟ್ಟಿಸಲು ಕಾಂಗ್ರೆಸ್ ಸಮಾನ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಒಲವು ಹೊಂದಿದೆ ಎಂದು ಅವರು ಹೇಳಿದ್ದಾರೆ.ರಾಯ್‌ಪುರದಲ್ಲಿ ನಡೆಯುತ್ತಿರುವ ೮೫ನೇ ಕಾಂಗ್ರೆಸ್ ಮಹಾಧಿವೇಶನದ ಮೊದಲ ದಿನದ ಕಾರ್ಯಕ್ರಮದಲ್ಲಿ ಗೈರು ಹಾಜರಾಗಿದ್ದ ಸೋನಿಯಾಗಾಂಧಿ ಇಂದು ಎರಡನೇ ದಿನದ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ನನಗೆ ಅತ್ಯಂತ ಸಂತೋಷಕರ ಸಂಗತಿಯೆಂದರೆ, ನನ್ನ ರಾಜಕೀಯ ಇನ್ನಿಂಗ್ಸ್ ಭಾರತ್ ಜೋಡೋ ಯಾತ್ರೆಯೊಂದಿಗೆ ಮುಕ್ತಾಯಗೊಂಡಿದೆ” ಎಂದಿದ್ದಾರೆ.ಸಮಾವೇಶದ ಎರಡನೇ ದಿನದಂದು ೧೫,೦೦೦ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಭಾರತ್ ಜೋಡೋ ಯಾತ್ರೆ ಒಂದು ಮಹತ್ವದ ತಿರುವು ನೀಡಿದೆ. ಭಾರತದ ಜನರು ಅಗಾಧವಾಗಿ ಸಾಮರಸ್ಯ, ಸಹಿಷ್ಣುತೆ ಮತ್ತು ಸಮಾನತೆಯನ್ನು ಬಯಸುತ್ತಾರೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಅವರು ಹೇಳಿದ್ದಾರೆ.ಕಾಂಗ್ರೆಸ್ ಪಕ್ಷ ಸದಾ ಜನರ ಪರವಾಗಿ ನಿಂತಿದೆ. ಮುಂದೆಯೇ ಜನರ ಪರವಾಗಿ ಕೆಲಸ ಮಾಡಲಿದೆ. ಎಲ್ಲ ನಾಯಕರೂ ಒಗ್ಗೂಡಿ ಹೋರಾಟ ಮಾಡುವ ಮೂಲಕ ಅಧಿಕಾರ ಹಿಡಿಯಲು ಶ್ರಮಹಾಕಿ ಎಂದು ಸಲಹೆ ನೀಡಿದ್ದಾರೆ

ಪಕ್ಷಕ್ಕೆ ತಿರುವು:

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆ ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ತಿರುವು ಎಂದು ಬಣ್ಣಿಸಿದ ಸೋನಿಯಾ ಗಾಂಧಿ ಅವರು ಅದ್ಧೂರಿ ಪಕ್ಷ ಯಶಸ್ವಿ ಪಯಣ ನಡೆಸಿದೆ ಎಂದು ಹೇಳಿದ್ದಾರೆ.ಬಲಿಷ್ಠ ಕಾರ್ಯಕರ್ತರೇ ಪಕ್ಷದ ಶಕ್ತಿ “ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷವಲ್ಲ, ಆದರೆ ಇಲ್ಲಿ ಪ್ರಜಾಪ್ರಭುತ್ವವಿದೆ” ಎಂದು ಅವರು ತಿಳಿಸಿದ್ದಾರೆ.ಕಾಂಗ್ರೆಸ್ ಮತ್ತು ಇಡೀ ದೇಶಕ್ಕೆ ಸವಾಲಿನ ಸಮಯ, ಅದನ್ನು ಮೆಟ್ಟಿನಿಂತು ಮುಂಬರುವ ದಿನಗಳಲ್ಲಿ ಪಕ್ಷವನ್ನು ಕೇಂದ್ರ ಮತ್ತುರಾಜ್ಯಗಳಲ್ಲಿ ಅಧಿಕಾರಕ್ಕೆ ತರಲು ಎಲ್ಲವೂ ಒಗ್ಗೂಡಿ ಕೆಲಸ ಮಾಡಿ ಎಂದು ಕರೆ ನೀಡಿದ್ದಾರೆ.ಡಾ.ಸಿಂಗ್ ಅವಧಿ ತೃಪ್ರಿದಾಯಕ”ಯಪಿಎ ಸರ್ಕಾರದ “ಡಾ. ಮನಮೋಹನ್ ಸಿಂಗ್ ಅವರ ಸಮರ್ಥ ನಾಯಕತ್ವದ ಜೊತೆಗೆ ೨೦೦೪ ಮತ್ತು ೨೦೦೯ ರಲ್ಲಿನ ವಿಜಯಗಳು ನನಗೆ ವೈಯಕ್ತಿಕ ತೃಪ್ತಿ ನೀಡಿದೆ. ಅದಕ್ಕಿಂತಲೂ ಹೆಚ್ಚು ತೃಪ್ತಿ ನೀಡುವುದು ಭಾರತ್ ಜೋಡೋ ಯಾತ್ರೆ ಎಂದು ತಿಳಿಸಿದ್ದಾರೆ.ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವನ್ನು ಕಾರ್ಯವೈಖರಿಯನ್ನು ಸೋನಿಯಾಗಾಂಧಿ ಶ್ಲಾಘಿಸಿದ ಅವರು . ದೇಶದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ಪಕ್ಷವು ಕೆಲಸ ಮಾಡಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರದ ವಿರುದ್ದ ವಾಗ್ದಾಳಿ

ದೇಶದಲ್ಲಿ ಬಿಜೆಪಿ-ಆರೆಸ್‌ಎಸ್ ದೇಶದ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿದೆ ಮತ್ತು ಬುಡಮೇಲು ಮಾಡಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಸಾಂವಿಧಾನಿಕ ಸಂಸ್ಥೆಗಳನ್ನು ವಶಪಡಿಸಿಕೊಂಡಿರುವುದು ಆರ್ಥಿಕ ವಿನಾಶಕ್ಕೆ ಕಾರಣವಾಯಿತು. ಕೆಲವು ಉದ್ಯಮಿಗಳ ಪರವಾಗಿ ಸರ್ಕಾರ ನಿಂತಿದೆ.ಅಲ್ಪ ಸಂಖ್ಯಾತ ಸಮುದಯವನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ದವೂ ಹರಿಹಾಯ್ದಿದ್ದಾರೆ.

ಪ್ರಮುಖ ನಿರ್ಧಾರ ಸಾಧ್ಯತೆ:

೨೦೨೪ ರ ಲೋಕಸಭೆ ಚುನಾವಣೆಗೆ ಇತರ ವಿರೋಧ ಪಕ್ಷಗಳೊಂದಿಗೆ ಚುನಾವಣಾ ಸಂಬಂಧ ಸೇರಿದಂತೆ ಪ್ರಮುಖ ನಿರ್ಧಾರಗಳನ್ನು ಕಾಂಗ್ರೆಸ್ ಮಹಾಧಿವೇಶನದಲ್ಲಿ ತೆಗೆದುಕೊಳ್ಳುವ ನಿರೀಕ್ಷೆಯಿದೆ.ಮಿತ್ರ ಪಕ್ಷದ ನಾಯಕರನ್ನು ಒಟ್ಟುಗೂಡಿಸುವ ಮತ್ತು ಮತದಾರರೊಂದಿಗೆ ಪಕ್ಷದ ಸಂಪರ್ಕ ಕಡಿತವನ್ನು ಪರಿಹರಿಸುವ ಗುರಿ ಹೊಂದಿರುವ ರಾಹುಲ್ ಗಾಂಧಿ ನೇತೃತ್ವದ ಬೃಹತ್ ದೇಶಾದ್ಯಂತದ ಕಾಲ್ನಡಿಗೆಯ ಭಾರತ್ ಜೋಡೋ ಯಾತ್ರೆಯ ನಡೆಯಲು ಕೂಡ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಒಂದರ ಹಿಂದೊಂದು ಚುನಾವಣೆಯ ಸೋಲುಗಳು, ಕೂಲಂಕುಷ ಪರೀಕ್ಷೆ ಮತ್ತು ನಾಯಕರ ನಿರ್ಗಮನಕ್ಕಾಗಿ ವರ್ಷಗಳ ಆಂತರಿಕ ಕಚ್ಚಾಟದ ನಂತರ, ಸೋನಿಯಾ ಗಾಂಧಿಯವರು ಅಕ್ಟೋಬರ್‍ನಲ್ಲಿ ಕುಟುಂಬದ ನಿಷ್ಠಾವಂತ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಸಾರಥ್ಯ ವಹಿಸಿದ್ದಾರೆ.