
ಮೈಸೂರು,ಫೆ.೨೮: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಪಕ್ಷಕ್ಕೆ ಮೈಸೂರಿನ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ತನ್ವೀರ್‌ಸೇಠ್ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಪ್ರಕಟಿಸಿ ಶಾಕ್ ನೀಡಿದ್ದಾರೆ.
ಈ ಸಂಬಂಧ ಎಐಸಿಸಿಗೆ ಪತ್ರ ಬರೆದು ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಉಲ್ಲೇಖಿಸಿದ್ದಾರೆ. ಅನಾರೋಗ್ಯದ ಕಾರಣ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ. ತಮಗೆ ಈ ಬಾರಿ ಟಿಕೆಟ್ ಬೇಡ, ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.
ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯದಲ್ಲಿ ಏರು-ಪೇರು ಆಗಿದೆ. ಮೊದಲಿನಂತೆ ಮಾನಸಿಕ ಹಾಗೂ ದೈಹಿಕವಾಗಿ ಶಕ್ತಿಯುತವಾಗಿಲ್ಲ. ಹೀಗಾಗಿ ನನಗೆ ಟಿಕೆಟ್ ಬೇಡ ಕಾಂಗ್ರೆಸ್‌ನಲ್ಲೇ ಮುಂದುವರೆಯುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
೨೦೧೯ರ ನ. ೧೭ ರಂದು ರಾತ್ರಿ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಶಾಸಕ ತನ್ವೀರ್‌ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು.
ಪ್ರಕರಣ ಕುರಿತಂತೆ ಎಸ್‌ಡಿಪಿಐ ಕಾರ್ಯಕರ್ತ ಫರ್ಹಾನ್‌ಪಾಷಾನನ್ನು ಪೊಲೀಸರು ಬಂಧಿಸಿದ್ದರು.