ರಾಜಕೀಯ ಜೀವನದಲ್ಲಿ ಇಂತಹ ಭ್ರಷ್ಟ ಸರ್ಕಾರ ನೋಡಿಲ್ಲ : ಸಿದ್ದರಾಮಯ್ಯ


ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ. ಏ.30 ನನ್ನ ರಾಜಕೀಯ ಜೀವನದಲ್ಲಿ ಇಂತಹ ಬಿಜೆಪಿಯ ಭ್ರಷ್ಟ ಸರ್ಕಾರ ನೋಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
ಪಟ್ಟಣದ ಗಂ ಭೀ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಕಾಂಗ್ರೆಸ್ ಚುನಾವಣೆ ಪ್ರಚಾರದಲ್ಲಿ ಮಾತನಾಡಿ ಈಗಿನ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರವಾಗಿದ್ದು. ಇವರು ರಾಜ್ಯವನ್ನು ಲೂಟಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇವರಿಗೆ ಅಧಿಕಾರ ಬಂದರೆ ರಾಜ್ಯ ಉಳಿಯುವುದಿಲ್ಲ. ನುಡಿದಂತೆ ನಡೆಯುವ ಸರ್ಕಾರ ಎಂದರೆ ಅದು ಕಾಂಗ್ರೆಸ್ ಸರ್ಕಾರ ನಮ್ಮ ಅಧಿಕಾರ ಅವಧಿಯಲ್ಲಿ ಹಲವಾರು ಭರವಸೆಗಳನ್ನು ಈಡೇರಿಸಿದ್ದೇವೆ. ಈ ಚುನಾವಣೆಯಲ್ಲಿ  ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ನಾವು ನೀಡಿರುವ ಗ್ಯಾರಂಟಿ ಕಾರ್ಡ್ ಎಲ್ಲಾ ಬರವಸೆಗಳನ್ನು ಈಡೇರಿಸುತ್ತೇವೆ. ಮಹಿಳೆಯರಿಗೆ ಉಚಿತ ಬಸ್ ಪಾಸ್, 10 ಕೆಜಿ ಅಕ್ಕಿ ಸೇರಿದಂತೆ ಎಲ್ಲಾ ಭರವಸೆಗಳನ್ನು  ನೀಡುತ್ತೇವೆ. ಬಡವರಿಗೆ 20 ಲಕ್ಷ ಮನೆ ನೀಡುವ ಗುರಿ ಇಟ್ಟುಕೊಂಡಿದ್ದೇವೆ. ಅದಕ್ಕಾಗಿ ಈ ಭಾಗದ ಕಾಂಗ್ರೆಸ್ ಅಭ್ಯರ್ಥಿ ಭೀಮ ನಾಯ್ಕ ಅವರನ್ನು ಆಶೀರ್ವದಿಸಿ ಎಂದರು.
 ಕಾಂಗ್ರೆಸ್ ಅಭ್ಯರ್ಥಿ ಎಸ್ ಭೀಮನಾಯ್ಕ್ ಮಾತನಾಡಿ ರಾಜ್ಯದಲ್ಲಿ ನೂರಕ್ಕೆ ನೂರು ಕಾಂಗ್ರೆಸ್ ಸರ್ಕಾರ ಬರುತ್ತದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಾರೆ. ಚುನಾವಣೆಯ ಸಂದರ್ಭದಲ್ಲಿ ನೀಡಿದ ಗ್ಯಾರಂಟಿ ಕಾರ್ಡ್ 5 ಭರವಸೆಗಳನ್ನು ಈಡೇರಿಸುತ್ತೇವೆ. ಈ ಭಾಗದ 40 ಕೆರೆಗಳ ನೀರು ತುಂಬುವ ಯೋಜನೆಯನ್ನು ಜಾರಿಗೊಳಿಸಲಾಗುವುದು. ಈಗಾಗಲೇ ಕ್ಷೇತ್ರದಲ್ಲಿ 2500 ಕೋಟಿ ರೂ. ಅನುದಾನ ಅಭಿವೃದ್ಧಿಯಾಗಿದೆ ಇದಕ್ಕೆ ಸಿದ್ದರಾಮಯ್ಯ ಕಾರಣ   ಅವರ ಮುಖ್ಯಮಂತ್ರಿ ಅವಧಿಯಲ್ಲಿ ಅನುದಾನ ನೀಡಿದ್ದಾರೆ. ಎರಡು ಬೃಹತ್ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಎಲ್ಲ ಅಭಿವೃದ್ಧಿಗಳ ಕೆಲಸಗಳನ್ನು ನೋಡಿ ನನಗೆ ಮತ ಚಲಾಯಿಸಬೇಕು ಎಂದರು.
 ಆರಂಭದಲ್ಲಿ ಸ್ವಾಗತ ಜಿಲ್ಲಾಧ್ಯಕ್ಷ ಶಿರಾಜ್ ಶೇಕ್ , ನಿರೂಪಣೆ ಕಾಂಗ್ರೆಸ್ ವಕ್ತಾರ ಪತ್ರೇಶ್ ಹಿರೇಮಠ್, ನಡೆಸಿದರು.
 ಈ ಸಂದರ್ಭದಲ್ಲಿ ಮಾಜಿಎಂಎಲ್‌ಸಿ ಅಲ್ಲಂ ವೀರಭದ್ರಪ್ಪ, ಮಾಜಿ ಲೋಕಸಭಾ ಸದಸ್ಯ ಉಗ್ರಪ್ಪ, ಕಾಂಗ್ರೆಸ್ ಮುಖಂಡರಾದ ಪ್ರಕಾಶ್ ರಾಥೋಡ್ ವಸಂತ ರಾವ್, ಸೇಲಂ, ಬಿವಿ ಶಿವಯೋಗಿ, ಕುರಿ ಶಿವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋರಿ  ಗೋಣಿಬಸಪ್ಪ, ದ್ವಾರಕೀಶ್, ಪುರಸಭೆ  ಸದಸ್ಯರಾದ ಮರಿ ರಾಮಪ್ಪ, ಪವಾಡಿ ಹನುಮಂತಪ್ಪ, ರಾಜೇಶ್ ಬ್ಯಾಡಗಿ, ಗಣೇಶ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಅಕ್ಕಿ ತೋಟೇಶ್, ಹೆಗ್ಡೆಳ್ ರಾಮಣ್ಣ, ದೊಡ್ಡರಾಮಣ್ಣ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಹಿರಾಬಾನು,  ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.