ರಾಜಕೀಯ ಪಕ್ಷಗಳ ಕಚೇರಿಗಳ ಮೇಲೆ ಐಟಿ ದಾಳಿ

ನವದೆಹಲಿ/ ಮುಂಬೈಸೆ.೮-ನೋಂದಾಯಿತ ಆದರೆ ಗುರುತಿಸಲ್ಪಡದ ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ, ದೇಶದಾದ್ಯಂತ ೧೧೦ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿ ಬಿಸಿ ಮುಟ್ಟಿಸಿದೆ.
ಗುಜರಾತ್, ದೆಹಲಿ, ಉತ್ತರ ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಹರಿಯಾಣ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿನ ರಾಜಕೀಯ ಪಕ್ಷಗಳ ಕಛೇರಿಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆ ಪತ್ರ ವಶಪಡಿಸಿಕೊಳ್ಳಲಾಗಿದೆ.
ಹಣಕಾಸು ಅವ್ಯವಹಾರ, ಉದ್ದೇಶಪೂರ್ವಕ ತೆರಿಗೆ ವಂಚನೆ, ಬೋಗಸ್ ದೇಣಿಗೆ ಸ್ವೀಕೃತಿ ಮತ್ತು ಕೆಲವು ಸಂಸ್ಥೆಗಳಿಂದ ಅಕ್ರಮ ಹಣ ವರ್ಗಾವಣೆ,ಸೇರಿದಂತೆ ಚುನಾವಣಾ ಆಯೋಗಕ್ಕೆ ಸಮಗ್ರ ಮಾಹಿತಿ ಸಲ್ಲಿಸದ ಆರೋಪದ ಮೇಲೆ ಈ ದಾಳಿ ನಡೆದಿದೆ
ಮುಂಬೈ ಮತ್ತು ಗುಜರಾತ್‌ನಲ್ಲಿ ಸುಮಾರು ೨೫೦ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನೋಂದಾಯಿತ ರಾಜಕೀಯ ಪಕ್ಷಗಳಾಗಿದ್ದರೂ ಪಾರದರ್ಶಕವಾಗಿ ನಡೆದುಕೊಳ್ಳದ ಹಿನ್ನೆಲೆಯಲ್ಲಿ ಹಾಗು ಸಕಾಲಿಕ ವರದಿ ಮತ್ತು ವಾರ್ಷಿಕ ಲೆಕ್ಕಪರಿಶೋಧನಾ ವರದಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ನೋಂದಾಯಿತವಾಗಿರುವ ರಾಜಕೀಯ ಪಕ್ಷಗಳು “ಇಲ್ಲಿಯವರೆಗೆ, ತನಿಖೆಯ ಇತರ ಹಣಕಾಸಿನ ಅಸಮರ್ಪಕತೆಗಳ ನಡುವೆ, ವಹಿವಾಟಿನ ಲೇಯರಿಂಗ್ ಮತ್ತು ನಕಲಿ ದೇಣಿಗೆಗಳ ಸ್ವೀಕೃತಿಯ ಮೂಲಕ ನಗದು ರಿಟರ್ನ್‌ಗಳ ಮೂಲಕ ಹಣ ಲೇವಾದೇವಿ ಕಾಯ್ದೆಡಯಿ ಈ ದೂರು ದಾಖಲು ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ರಾಜೀವ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ದಿನಗಳ ನಂತರ, ಚುನಾವಣಾ ಆಯೋಗ, ನೋಂದಾಯಿತ ಮತ್ತು ಅಸ್ತಿತ್ವದಲ್ಲಿಲ್ಲದ ೮೭ ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ತೆಗೆದು ಹಾಕಿತ್ತು.