ರಾಜತಂತ್ರ ಟೀಸರ್ ಅನಾವರಣ

ರಾಘವೇಂದ್ರ ರಾಜಕುಮಾರ್ ನಟನೆ ” ರಾಜತಂತ್ರ” ಬಿಡುಗಡೆಗೆ ಸಿದ್ದತೆ ನಡೆಸಿದೆ.

ಈ ಹಿನ್ನೆಲೆಯಲ್ಲಿ ಚಿತ್ರ ತಂತ್ರ ಟೀಸರ್ ಬಿಡುಗಡೆ ಮಾಡಿದೆ. ಎಲ್ಲಾ ಅಂದುಕೊಂಡಂತೆ ಆದರೆ ಹೊಸವರ್ಷದ ಆರಂಭಕ್ಕೆ ಚಿತ್ರ ತೆರೆಗೆ ಬರಲಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಗಮಿಸಿ ಟೀಸರ್ ಬಿಡುಗಡೆ ಮಾಡಿ ಶುಭ ಹಾರೈಸಿದರು.

ನಟ ರಾಘಣ್ಣ, ಈ ಥರದ ಪಾತ್ರಮಾಡಿರಲಿಲ್ಲ. ಇದು ಹೊಸ ಅನುಭವ. ನಾನು ಮಾಡಿದ್ದೇನೆ ಎಂಬುದಕ್ಕಿಂತ ಇವರೆಲ್ಲ ನನ್ನ ಕಡೆ ಮಾಡಿಸಿದ್ದಾರೆ ಎಂದರು.

ನಿರ್ದೇಶಕ ಪಿವಿಆರ್ ಸ್ವಾಮಿ ಮಾತನಾಡಿ,ನಿವೃತ್ತ ಆರ್ಮಿ ಆಧಿಕಾರಿಯಾಗಿ ಕ್ಯಾಪ್ಟನ್ ರಾಜಾರಾಮ್ ಆಗಿ ರಾಘಣ್ಣ ಕಾಣಿಸಿಕೊಂಡಿದ್ದಾರೆ. ಸಮಾಜದೊಳಗಿನ ಲೋಪಗಳನ್ನು ತಮ್ಮದೆ ಶೈಲಿಯಲ್ಲಿ ಸರಿಪಡಿಸುತ್ತಾರೆ. ಅದೇಗೆ ಎಂಬುದನ್ನು ಸಿನಿಮಾದಲ್ಲಿಯೇ ನೋಡಿ. ಅಷ್ಟೇ ಅಲ್ಲ ಈ ಸಿನಿಮಾದಲ್ಲಿ ರಾಘಣ್ಣ ಅವರ ಕಡೆಯಿಂದ ಫೈಟ್ ಸಹ ಮಾಡಿಸಿದ್ದೇವೆ ಎಂದರು

ನಿರ್ಮಾಪಕ ವಿಜಯ ಭಾಸ್ಕರ್ ಮಾತನಾಡಿ,‌ನೋಡಿ ಹರಸಿ ಎಂದರು.

ಜೆ.ಎಂ.ಪ್ರಹ್ಲಾದ್, ವಿಜಯ್ ಭಾಸ್ಕರ್ ಹರಪನಹಳ್ಳಿ ಹಾಗೂ ಪಿ.ಆರ್.ಶ್ರೀಧರ್ ಚಿತ್ರನಿರ್ಮಿಸಿದ್ದಾರೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಪತ್ರ ನೀಡಿದೆ.

ಶ್ರೀಸುರೇಶ್ ಸಂಗೀತ,‌ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣವಿದೆ‌

ರಾಘವೇಂದ್ರ ರಾಜಕುಮಾರ್, ದೊಡ್ಡಣ್ಣ, ಶ್ರೀನಿವಾಸ ಮೂರ್ತಿ, ಭವ್ಯ, ಶಂಕರ್ ಅಶ್ವಥ್, ನೀನಾಸಂ ಅಶ್ವಥ್, ಮುನಿರಾಜು ಸೇರಿದಂತೆ ಕಲಾವಿದರ ದೊಡ್ಡ ಬಳಗವೇ ಇದೆ.