ರಾಜದಲ್ಲಿ ಕೈ ಕಮಲ ಸರ್ಕಾರ ಡಿಕೆಶಿ

ಬೆಂಗಳೂರು, ನ. ೪- ರಾಜ್ಯದಲ್ಲಿರುವುದು ಸಂಪೂರ್ಣ ಬಿಜೆಪಿ ಸರ್ಕಾರವಲ್ಲ .ಬದಲಾಗಿ ಕಾಂಗ್ರೆಸ್ ಬಿಜೆಪಿ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು, ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮತಚಲಾಯಿಸಿ ಎಂದು ಮತದಾರರಿಗೆ ಮನವಿ ಮಾಡಿದರು. ಆದರೂ ಈ ಬಾರಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಡಿಮೆ ಮತದಾನವಾಗಿದೆ ಇದನ್ನು ನೀವೇ ಅವಲೋಕನ ಮಾಡಿ ಎಂದು ಹೇಳಿದರು

ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಅಭ್ಯರ್ಥಿ ಇಂಧನ ಖಾತೆ ಅಲ್ಲ, ಮುಖ್ಯಮಂತ್ರಿಯಾಗಲಿ ನಮ್ಮದೇನೂ ಅಭ್ಯಂತರವಿಲ್ಲ ಆದರೆ ರಾಜ್ಯದಲ್ಲಿರುವುದು ಬಿಜೆಪಿ ಪಕ್ಷದ ಸರಕಾರವನ್ನು ಬದಲಾಗಿ ಕಾಂಗ್ರೆಸ್ ಬಿಜೆಪಿ ಸರ್ಕಾರ ಎಂದು ಅವರು ತಿಳಿಸಿದರು

ಉಪಚುನಾವಣೆ ನಡೆದಿರುವ ಶಿರಾ ಮತ್ತು ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಈ ಚುನಾವಣೆ ಕಾಂಗ್ರೆಸ್ ಪಕ್ಷದ ಗೆಲುವಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳಿಂದ ಬೇಸತ್ತು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸುಶಿಕ್ಷಿತ ಮತದಾರರು ಮತ ಚಲಾವಣೆ ಮಾಡಲು ಬಂದಿಲ್ಲ. ಇದು ಸರ್ಕಾರದ ದುರಾಡಳಿತಕ್ಕೆ ನಿದರ್ಶನ ಎಂದು ಅವರು ಹೇಳಿದರು.

ಬಿಜೆಪಿ ಅಭ್ಯರ್ಥಿಯ ಚುನಾವಣಾ ಅಕ್ರಮದ ಬಗ್ಗೆ ಈಗಾಗಲೇ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಆಯೋಗವು ತನಿಖೆ ನಡೆಸಿದೆ ಮುಂದೆ ಏನಾಗಲಿದೆ ಕಾದು ನೋಡೋಣ ಎಂದು ತಿಳಿಸಿದರು.

ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ನಮಗೆ ಮತದಾರರ ಮೇಲೆ ನಂಬಿಕೆ ಇದೆ ಎಂದು ಹೇಳಿದ ಅವರು ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದಾರೆ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ನಟ ನಿರ್ದೇಶಕ ನಿರ್ಮಾಪಕ ಅವರು ಯಾವಾಗ ಬೇಕು ಅಂದರೆ ಆ ರೀತಿ ಮಾತನಾಡುವ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.