ರಾಜಧಾನಿಯ 57 ಮಂದಿ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ


ಬೆಂಗಳೂರು, ನ.19- ಕಾಲೇಜು ಆರಂಭವಾಗಿ ಎರಡನೇ ದಿನದಲ್ಲಿ ರಾಜಧಾನಿ ಬೆಂಗಳೂರಿನ  57 ಮಂದಿ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿರುವುದು ಮತ್ತಷ್ಟು ಆತಂಕ ಹೆಚ್ಚಿಸಿದೆ.
ಗುರುವಾರ ಈ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ಮಂಜನಾಥ್ ಪ್ರಸಾದ್, 2020-21ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜು ಪ್ರಾರಂಭದ ಹಿನ್ನೆಲೆ ನಗರದಲ್ಲಿ 11 ಸಾವಿರ ಮಂದಿ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 7,753 ಮಂದಿಯ ವರದಿ ಬಂದಿದೆ. ಇದರಲ್ಲಿ 57 ಮಂದಿ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಧೃಡವಾಗಿದೆ ಎಂದರು.
ನ.17ರಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿಗಳು ಪ್ರಾರಂಭ ಮಾಡಲಾಗಿತ್ತು. ಕಾಲೇಜು ಪ್ರಾರಂಭವಾದ ಮೂರು ದಿನದೊಳಗೆ 57 ಮಂದಿ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿರುವುದು ಪೋಷಕರಲ್ಲಿ ಹಾಗೂ ಉಪನ್ಯಾಸಕರಲ್ಲಿ ಆತಂಕ ಮನೆ ಮಾಡಿದೆ.