ರಾಜಸಭೆ ಚುನಾವಣೆ: ಸೂಪರ್ ಸ್ಟಾರ್ ರಜನಿಕಾಂತ್ ಇಲ್ಲವೇ ನಟಿ ಖುಷ್ಬೂಗೆ ಟಿಕೆಟ್


ಬೆಂಗಳೂರು ನ. 16 ರಾಜ್ಯಸಭಾ ಸದಸ್ಯರಾಗಿದ್ದ ಅಶೋಕ್ ಗಸ್ತಿ ಅವರ ನಿಧಾನದಿಂದ ತೆರವಾಗಿರುವ ರಾಜ್ಯಸಭಾ ಸ್ಥಾನಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ .ಮತ್ತು
ನಟಿ ಖುಷ್ಬು ಅವರ ಹೆಸರು ಕೇಳಿಬರುತ್ತಿದೆ
ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿಸೆಂಬರ್ 1 ರಂದು ಚುನಾವಣೆ ನಡೆಯಲಿದ್ದು ಇದೇ ತಿಂಗಳ 18 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಹಾಗಾಗಿ ಇಂದು ಇಲ್ಲವೇ ನಾಳೆ ಬಿಜೆಪಿ ಅಭ್ಯರ್ಥಿಯನ್ನು ಅಂತಿಮ ಗೊಳಿಸಬೇಕಿದೆ
ರಾಜ್ಯ ಬಿಜೆಪಿಯ ಕೋರ್ ಕಮಿಟಿ ರಾಜ್ಯ ವಿಧಾನಸಭೆಯಿಂದ ಆಯ್ಕೆಯಾಗುವ ಈಒಂದು ಸ್ಥಾನಕ್ಕೆ ದಿವಂಗತ ಅಶೋಕ್ ಗಸ್ತಿ ಅವರ ಪತ್ನಿ ಸುಮಾ ಗಸ್ತಿ, ಹಿಂದುಳಿದ ವರ್ಗಗಳ ಶಾಶ್ವತ ಮಾಜಿ ಅಧ್ಯಕ್ಷ ಶಂಕ್ರಪ್ಪ ಮಾಜಿ ಹಾಗೂ ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನ ಇವರುಗಳ ಹೆಸರುಗಳನ್ನು ಅಂತಿಮಗೊಳಿಸಿ ಹೈಕಮಾಂಡ್ ಅನುಮೋದನೆಗೆ ಕಳುಹಿಸಿದೆ ಆದರೆ ಪಕ್ಷದ ಹೈಕಮಾಂಡ್ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸೂಪರ್ ಸ್ಟಾರ್ ರಜನಿಕಾಂತ್ ಇಲ್ಲವೇ ನಟಿ ಖುಷ್ಬು ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ ಸೂಪರ್ ಸ್ಟಾರ್ ರಜನಿಕಾಂತ್ ರಾಜಕಾರಣದಿಂದ ದೂರ ಇರುವುದಾಗಿ ಈಗಾಗಲೇ ಹೇಳಿದ್ದಾರೆ ಹಾಗಾಗಿ ಅವರು ರಾಜಸಭೆಗೆ ಹೋಗಲು ಹೋಗಲು ಒಪ್ಪುತ್ತಾರೆಯೇ ಎಂಬುದು ಖಚಿತವಾಗಿಲ್ಲ
ಒಂದು ವೇಳೆ ರಜನಿಕಾಂತ್ ಅವರು ರಾಜ್ಯಸಭೆಗೆ ಹೋಗಲು ಒಪ್ಪದಿದ್ದರೆ ಅವರಿಗೆ ಅವರಿಗೆ ನಟಿ ಖುಷ್ಬು ಅವರಿಗೆ ಅವಕಾಶ ಸಿಗಬಹುದು ಎಂದು ಹೇಳಲಾಗುತ್ತಿದೆ

ರಾಜ್ಯಸಭೆಗೆ ಅಭ್ಯರ್ಥಿಗಳ ಆಯ್ಕೆಯನ್ನು ಬಿಜೆಪಿಯ ವರಿಷ್ಟರು ಮಾಡಲಿದ್ದು ಯಾರು ಅಭ್ಯರ್ಥಿಗಳು ಆಗುತ್ತಾರೆ ಎಂಬುದು ಕುತೂಹಲ ಮೂಡಿಸಿದೆ ಕಳೆದ ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ವರು ವರಿಷ್ಠರು ಅಚ್ಚರಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದರು ಈ ಬಾರಿಯೂ ರಾಜ್ಯ ಕೋರ್ ಕಮಿಟಿ ಶಿಫಾರಸು ಮಾಡಿರುವ ಅಭ್ಯರ್ಥಿಗಳು ಬಿಟ್ಟು ಅಚ್ಚರಿ ಅಭ್ಯರ್ಥಿಗಳು ಆಯ್ಕೆಯಾದರು ಅಚ್ಚರಿಪಡಬೇಕಿಲ್ಲ
ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿಗೆ ಇರುವ ಶಾಸಕರುಗಳ ಸಂಖ್ಯಾಬಲದ ಮೇಲೆ ಬಿಜೆಪಿ ರಾಜ್ಯಸಭೆಯ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಲಿದೆ ಹಾಗಾಗಿ ಬಿಜೆಪಿಯಿಂದ ಯಾರು ಅಭ್ಯರ್ಥಿಯಾದರೂ ಅವರ ಆಯ್ಕೆ ಬಹುತೇಕ ಅವಿರೋಧ ವಾಗಲಿದೆ