ರಾಜಸ್ತಾನ: ಕೈ ನಲ್ಲಿ ನಿಲ್ಲದ ಮುಸುಕಿನ ಗುದ್ದಾಟ

ಜೈಪುರ,ನ.೨೫- ರಾಜಸ್ತಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಸಚಿನ್ ಪೈಲೆಟ್ ನಡುವಿನ ಸಂಘರ್ಷ, ಅಧಿಕಾರ ಪಡೆಯುವ ಮುಸುಕಿನ ಗುದ್ದಾಟ ಸದ್ಯಕ್ಕೆ ನಿಲ್ಲುವಂತೆ ಕಾಣುವ ಯಾವುದೇ ಲಕ್ಷಣ ಕಾಣುತ್ತಿಲ್ಲ.ಸಚಿನ್ ಪೈಲೆಟ್ ಅವರನ್ನು ಶೀಘ್ರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿಯಾಗಿ ನಿಯೋಜಿಸಲಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿರುವ ನಡುವೆಯೇ ಹೈಕಮಾಂಡ್ ಇಂತಹ ಕೆಲಸಕ್ಕೆ ಕೈ ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಅಶೋಕ್ ಗೆಲ್ಹೋಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಸಚಿನ್ ಪೈಲೆಟ್ ಗದ್ದರ್( ದೇಶದ್ರೋಹಿ) ಹೀಗಾಗಿ ಕಾಂಗ್ರೆಸ್ ನಾಯಕತ್ವ ಅವರನ್ನು ಮುಖ್ಯಮಂತ್ರಿ ಮಾಡಲು ಸಾಧ್ಯವಿಲ್ಲ ಎಂದು ಅವರು ಈ ವಿಷಯ ತಿಳಿಸಿದ್ಧಾರೆ.ನಿನ್ನೆಯಷ್ಟೇ ಮಧ್ಯಪ್ರದೇಶದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಸಚಿನ್ ಪೈಲಟ್, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗೂಡಿ ಹೆಜ್ಜೆ ಹಾಕಿದ ಬೆನ್ನಲ್ಲೇ ಗೆಲ್ಹೋಟ್ ಈ ವಿಷಯ ತಿಳಿಸಿದ್ದಾರೆ.
ಮುಂದಿನ ತಿಂಗಳು ಭಾರತ್ ಜೋಡೋ ಯಾತ್ರೆ ರಾಜಸ್ಥಾನಕ್ಕೆ ಪ್ರವೇಶಿಸುವ ಮೊದಲು ನಾಯಕತ್ವದ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಅವರ ಪ್ರತಿಸ್ಪರ್ಧಿ ಪಾಳೆಯದ ಬೇಡಿಕೆಯ ನಡುವೆ ಪಕ್ಷದ ಹೈಕಮಾಂಡ್‌ಗೆ ಸ್ಪಷ್ಟ ಸಂದೇಶ ಕಳುಹಿಸುವ ಮೂಲಕ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸಚಿನ್ ಪೈಲೆಟ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿನ್ ಪೈಲಟ್ ” ದೇಶದ್ರೋಹಿ ಅವರು ಎಂದು ಬಿಜೆಪಿ ಜೊತೆ ಕೈಜೋಡಿಸಿದ್ದರು. ಪೈಲಟ್‌ಗೆ ೧೦ ಶಾಸಕರ ಬೆಂಬಲವಿಲ್ಲ ಎಂದು ಹೇಳಿದ ಅಶೋಕ್ ಗೆಹ್ಲೋಟ್, ಪೈಲೆಟ್ ಅವರನ್ನು ಸಿಎಂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.