ರಾಜಸ್ಥಾನ ಚುನಾವಣೆ: ಕೈ ಗೆಲುವು, ಸಚಿನ್ ವಿಶ್ವಾಸ

ಜೈಪುರ,ಅ.೨- ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಗ್ಗಟ್ಟಿನಿಂದ ಹೋರಾಡುವ ಮೂಲಕ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ರಾಜ್ಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಚಿನ್ ಪೈಲೆಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ೩೦ ವರ್ಷಗಳ ಪರ್ಯಾಯ ಸರ್ಕಾರದ ಪ್ರವೃತ್ತಿ ರಾಜ್ಯದಲ್ಲಿ ಈ ಬಾರಿ ಬದಲಾವಣೆ ಆಗಲಿದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಜೊತೆಗೆ ೨೦೨೪ ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪ್ರಬಲ ಸ್ಪರ್ಧೆ ಒಡ್ಡುವುದಾಗಿ ಅವರು ತಿಳಿಸಿದ್ದಾರೆ. ನೀಮ್ ಕಾ ಥಾನಾ ಜಿಲ್ಲೆಯ ಅಜಿತ್‌ಗಢದಲ್ಲಿ ’ಕಿಸಾನ್ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಸರ್ಕಾರವನ್ನು ಮುನ್ನಡೆಸುವಲ್ಲಿ ಮತ್ತು ರಾಜಸ್ಥಾನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತೆ ಸರ್ಕಾರ ರಚಿಸುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲರನ್ನೂ ಒಗ್ಗಟ್ಟಾಗಿ ಹೋರಾಟ ಮಾಡುವ ಅಗತ್ಯ ಮತ್ತು ಅನಿವಾರ್ಯತೆ ನಮ್ಮ ಮುಂದೆ ಇದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ಸಣ್ಣ ಕಾರ್ಯಕರ್ತರಿಂದ ಹಿಡಿದು ಹಿರಿಯ ನಾಯಕರ ತನಕ ಜೊತೆಯಾಗಿ ಕೆಲಸ ಮಾಡಬೇಕು ಆಗ ಮಾತ್ರ ಕಾಂಗ್ರೆಸ್ ಕುಟುಂಬ ಸುಭಿಕ್ಷವಾಗಿ ಮತ್ತೆ ಸರ್ಕಾರ ರಚನೆಯಾಗಲಿದೆ,” ಎಂದು ಹೇಳಿದ್ದಾರೆ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಪುನರಾವರ್ತನೆಯಾಗುತ್ತದೆ ಮತ್ತು ರಾಜ್ಯದಲ್ಲಿ ಪರ್ಯಾಯ ಸರ್ಕಾರ ಮಾಡುವ ೩೦ ವರ್ಷಗಳ ಸಂಪ್ರದಾಯ ಅಳಿಸಿ ಹಾಕುತ್ತೇವ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ೨೦೧೩ರಲ್ಲಿ ರಾಜಸ್ಥಾನದಲ್ಲಿ ಬಿಜೆಪಿ ೨೦೦ ವಿಧಾನಸಭಾ ಸ್ಥಾನಗಳ ಪೈಕಿ ೧೬೩ ಸ್ಥಾನಗಳನ್ನು ಗೆದ್ದಾಗ ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿತ್ತು . ೨೦೧೮ರಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರ ಹಿಡಿಯಿತು. ಅಧಿಕಾರ ಮತ್ತೆ ಉಳಿಸಿಕೊಳ್ಳಲಿದ್ದೇವೆ ಎಂದಿದ್ದಾರೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಧ್ಯಪ್ರದೇಶ, ತೆಲಂಗಾಣ ಮತ್ತು ರಾಜಸ್ಥಾನ ಸೇರಿದಂತೆ ದೇಶಾದ್ಯಂತ ರ್ಯಾಲಿಗಳನ್ನು ನಡೆಸುತ್ತಿದ್ದಾರೆ. ರಾಜ್ಯಲ್ಲಿಯೂ ಅವರು ರಾಲಿ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.