ರಾಜಾ ವೆಂಕಟಪ್ಪ ನಾಯಕ ಅವರಿಗೆ ಮಂತ್ರಿ ಸ್ಥಾನ ನೀಡಲು ಒತ್ತಾಯ

ಸುರಪುರ :ಮೇ.16:ನೂತನ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಸಚಿವರನ್ನಾಗಿ ಮಾಡಬೇಕು ಮತ್ತು ಯಾದಗಿರಿ ಉಸ್ತುವಾರಿ ಸಚಿವರನ್ನಾಗಿ ನೇಮಿಸ ಬೇಕು ಎಂದು ರವಿಚಂದ್ರ ಆನಂದ ಸಾಹುಕಾರ ಒತ್ತಾಯಿಸಿದ್ದಾರೆ. ಈ ಮೂಲಕ ಪ್ರಕಟಣೆ ಯಲ್ಲಿ ತಿಳಿಸಿರುವ ಅವರು ರಾಜ್ಯ ನಾಯಕರಲ್ಲಿ ನಂಬಿಕೆಯುಳ್ಳವರಾಗಿದ್ದು ಈ ಬಾರಿ 25000 ಸಾವಿರಕ್ಕಿಂತ ಹೆಚ್ಚು ಮತಗಳ ಅಂತರದಲ್ಲಿ ಜಯಗಳಿಸಿ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ಕಾಂಗ್ರೇಸ್ ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧರಾಗಿದ್ದಾರೆ. ಎಲ್ಲಾ ವರ್ಗ ಮತ್ತು ಸಮುದಾಯದ ಜನರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಸರ್ವ ಜನಾಂಗಗಳ ಅಭಿವೃದ್ಧಿ ಬಯಸುವ ಅಪರೂಪದ ವ್ಯಕ್ತಿತ್ವ ಅವರದ್ದಾಗಿದ್ದು ಮಂತ್ರಿ ಸ್ಥಾನ ನೀಡಬೇಕು ಎಂದು ರವಿಚಂದ್ರ ಆನಂದ ಸಾಹುಕಾರ ಮನವಿ ಮಾಡಿದ್ದಾರೆ.