ರಾಜೀನಾಮೆ ಸುದ್ದಿ ಹರಡಿದರೆ ಮಾನಹಾನಿ ಪ್ರಕರಣ ದಾಖಲು : ಡಿಕೆ ಶಿವಕುಮಾರ್ ಎಚ್ಚರಿಕೆ

ನವದೆಹಲಿ ,ಮೇ 16 -ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟು ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಸುಳ್ಳು ಸುದ್ದಿ ಪ್ರಕಟಿಸಿದರೆ ಅಂತಹ ವಾಹಿನಿಗಳ ವಿರುದ್ದ ಮಾನಹಾನಿ ಪ್ರಕರಣ ಹೂಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

“ಯಾವುದಾದರೂ ಚಾನೆಲ್ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವರದಿ ಮಾಡುತ್ತಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ..ಕೆಲವರು ರಾಜೀನಾಮೆ ನೀಡುತ್ತೇನೆ ಎಂದು ವರದಿ ಮಾಡುತ್ತಿದ್ದಾರೆ ಇದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ

ನನ್ನ ತಾಯಿ ನನ್ನ ಪಕ್ಷ, ನಾನು ಈ ಪಕ್ಷವನ್ನು ಕಟ್ಟಿದ್ದೇನೆ. ಶಾಸಕರು, ನನ್ನ ಪಕ್ಷ ಜೊತೆಗಿದೆ ಎಂದು ಅವರು ಹೇಳಿದ್ದಾರೆ.

ನಮ್ಮದು ಒಗ್ಗಟ್ಟಿನ ಮನೆ, ನಮ್ಮ ಸಂಖ್ಯೆ 135. ಇಲ್ಲಿ ಯಾರನ್ನೂ ವಿಭಜಿಸಲು ಬಯಸುವುದಿಲ್ಲ. ಅವರು ನನ್ನನ್ನು ಇಷ್ಟಪಡಲಿ ಅಥವಾ ಇಲ್ಲದಿರಲಿ, ಕೆಪಿಸಿಸಿ ಅಧ್ಯಕ್ಷ ನಾನು. ಜವಾಬ್ದಾರಿಯ ವ್ಯಕ್ತಿ ಯಾರಿಗೂ ಹೆದರುವುದಿಲ್ಲ ಮತ್ತು ಬ್ಲಾಕ್ ಮೇಲ್ ಮಾಡುವುದಿಲ್ಲ ಎಂದಿದ್ದಾರೆ‌

ಪಕ್ಷವೇ ನನ್ನ ದೇವರು.ನಾವು ಈ ಪಕ್ಷವನ್ನು ಕಟ್ಟಿದ್ದೇವೆ, ನಾನು ಅದರ ಭಾಗವಾಗಿದ್ದೇನೆ ಮತ್ತು ಇದರಲ್ಲಿ ನಾನು ಒಬ್ಬಂಟಿಯಲ್ಲ ನನ್ನೊಂದಿಗೆ 135 ಶಾಸಕರಿದ್ದಾರೆ ಎಂದಿದ್ದಾರೆ.

“ನಾವು ಈ ಕಾಂಗ್ರೆಸ್ ಪಕ್ಷ ಕಟ್ಟಿದ್ದೇವೆ, ನಾನು ಅದರ ಭಾಗವಾಗಿದ್ದೇನೆ … ತಾಯಿ ತನ್ನ ಮಗುವಿಗೆ ಎಲ್ಲವನ್ನೂ ನೀಡುತ್ತಾಳೆ ಎಂದು ತಿಳಿಸಿದ್ದಾರೆ.

ರಾಜ್ಯ ಪಕ್ಷದ ಅಧ್ಯಕ್ಷರಾಗಿ ತಮ್ಮ ನಿರೀಕ್ಷೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಈ ಹಿಂದೆ ಏನಾಯಿತು, ಅದು ಹೇಗೆ ಸಂಭವಿಸಿತು ಎಂಬ ಬಗ್ಗೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ, ಅದು ಮುಗಿದ ಅಧ್ಯಾಯ ಎಂದಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಜನಾದೇಶದ ಹೊರತಾಗಿಯೂ, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹಿರಿಯ ನಾಯಕರಾದ ಡಿಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ರೇಸ್‌ನಲ್ಲಿ ಇರುವುದರಿಂದ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಕೆರಳಿಸಿದೆ.