ರಾಜ್ಯಕ್ಕೆ ಬರಪರಿಹಾರ ಅನುದಾನ ಬಿಡುಗಡೆಗೆ ಸಿಪಿಐ ಒತ್ತಾಯ

ಸಂಜೆವಾಣಿವಾರ್ತೆ 

ಹರಪನಹಳ್ಳಿ.ಫೆ.9; ಕೇಂದ್ರ ಸರ್ಕಾರ ಕೂಡಲೇ ಕರ್ನಾಟಕಕ್ಕೆ ಬರ ಪರಿಹಾರ ಅನುದಾನ ಬಿಡುಗಡೆ ಮಾಡಬೇಕು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಭಾರತ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸ್ವಾದಿ) ಕಾರ್ಯಕರ್ತರು  ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿ ಪ್ರತಿಭಟನಾಕಾರರು ಬರಗಾಲ, ಸಬ್ಸಿಡಿಗಳ ಕಡಿತದಿಂದಾಗಿ ರೈತರು ಕೃಷಿಯಿಂದ ವಿಮುಖರಾಗಿ, ಕೃಷಿ ಕೂಲಿಕಾರರಾಗಿ, ಕಾರ್ಮಿಕರಾಗಿ ಮಾರ್ಪಾಡಾಗುತ್ತಿದ್ದಾರೆ. ನರೇಗಾ ಯೋಜನೆಯಲ್ಲಿ ಆಧಾರ ಕಾರ್ಡ ಕಡ್ಡಾಯಗೊಳಿಸಿ ಕಾರ್ಮಿಕರನ್ನು ಹೊರ ಹಾಕಲಾಗಿದೆ ಇಂತಹ ಕೇಂದ್ರದ ತಪ್ಪು ನೀತಿಯಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು ಕೂಡಲೇ ತಪ್ಪು ನಿರ್ಣಯಗಳನ್ನು ವಾಪಸ್ಸು ಪಡೆಯಬೇಕು ಎಂದು ಒತ್ತಾಯಿಸಿದರು.ಹಕ್ಕೋತ್ತಾಯಗಳು: ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಒಕ್ಕೂಟ ಸರ್ಕಾರ ಅಡ್ಡಿಯಾಗಬಾರದು, ಕರ್ನಾಟಕಕ್ಕೆ ಬರಗಾಲದ ಅನುದಾನವನ್ನು ಕೂಡಲೆ ಬಿಡುಗಡೆ ಮಾಡಬೇಕು, ಒಕ್ಕೂಟ ಸರ್ಕಾರ ತನ್ನ ಮನಸ್ಸಿಗೆ ಬಂದAತೆ ರಾಜ್ಯ ಸರ್ಕಾರಗಳು ಸಾಲ ಪಡೆಯುವಂತೆ ಮಾಡುವುದನ್ನು ನಿಲ್ಲಿಸಬೇಕು, ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಒಕ್ಕೂಟ ಸರ್ಕಾರ ಇಡಿ, ಸಿಬಿಐ ಹಾಗೂ ಆದಾಯ ತೆರಿಗೆ ವಿಭಾಗಗಳನ್ನು ದುರ್ಬಳಕೆ ಮಾಡುವುದನ್ನು ನಿಲ್ಲಿಸಬೇಕು. ರಾಜ್ಯದ ವಿಶ್ವ ವಿದ್ಯಾಲಯಗಳ ವಿಷಯದಲ್ಲಿ ಕುಲಪತಿಗಳಾಗಿ ರಾಜ್ಯಪಾಲರ ಹಸ್ತಕ್ಷೇಪ ಮಾಡುವುದನ್ನು ತಡೆಯಬೇಕು. ರಾಜ್ಯ ಶಾಸಕಾಂಗ ಅಂಗೀಕರಿಸಿದ ಶಾಸನಗಳನ್ನು ರಾಜ್ಯಪಾಲರು ತಡೆ ಹಿಡಿಯಬಾರದು ಮತ್ತು ವಿಳಂಭ ಮಾಡದೆ ಸಹಿ ಮಾಡುವಂತೆ ಕ್ರಮವಹಿಸಬೇಕು ಎಂದು ಹಕ್ಕೊತ್ತಾಯದ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿವಿಧ ಸಂಘಟನೆಯ ಮುಖಂಡರಾದ ಟಿ.ವಿ.ರೇಣುಕಮ್ಮ, ಹೆಚ್.ರಹಮತ್ತುಲ್ಲಾ, ಕುದುರಿ ನಾಗರಾಜ, ಕೆ.ರಾಜಪ್ಪ ಹುಲಿಕಟ್ಟಿ, ಈರಮ್ಮ ಸೇರಿದಂತೆ ಇತರರು ಇದ್ದರು.