ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದ ಹಿರಗೋಪನರ್ ಪ್ರವೀಣ್‍ಗೆ ಸನ್ಮಾನ

ಕಲಬುರಗಿ,ಏ.10-ನಗರದ ಪ್ರತಿಷ್ಠಿತ ಸರ್ವಜ್ಞ ಹಾಗೂ ಜಸ್ಟಿಸ್ ಶಿವರಾಜ ಪಾಟೀಲ ಕಾಲೇಜಿನ ವಿದ್ಯಾರ್ಥಿ ಹಿರಗೋಪನರ್ ಪ್ರವೀಣ್ ಸಿದ್ದಪ್ಪ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಹಾಗೂ ಕಲಬುರಗಿ ವಿಭಾಗಕ್ಕೆ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾನೆ.
ವಿದ್ಯಾರ್ಥಿಯ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರಾದ ಪ್ರೊ.ಚನ್ನಾರಡ್ಡಿ ಪಾಟೀಲ, ಅಧ್ಯಕ್ಷರಾದ ಗೀತಾ ಚನ್ನಾರಡ್ಡಿ ಪಾಟೀಲ, ಮುಖ್ಯ ಶೈಕ್ಷಣಿಕ ನಿರ್ದೇಶಕರಾದ ಅಭಿಷೇಕ ಚನ್ನಾರಡ್ಡಿ ಪಾಟೀಲ, ಪ್ರಾಚಾರ್ಯರಾದ ಎಂ.ಸಿ.ಕಿರೇದಳ್ಳಿ, ವಿನೂತಾ ಆರ್.ಬಿ, ಉಪ ಪ್ರಾಚಾರ್ಯರಾದ ಪ್ರಶಾಂತ ಕುಲಕರ್ಣಿ ಮತ್ತು ಉಪನ್ಯಾಸಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಪ್ರವೀಣ್ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.85, ಸದ್ಯ ದ್ವಿತೀಯ ಪಿಯುಸಿಯಲ್ಲಿ 99.17 ಅಂಕ ಪಡೆದಿರುವುದು ವಿಶೇಷವಾಗಿದೆ. ವಿದ್ಯಾರ್ಥಿಯ ಕಠಿಣ ಪರಿಶ್ರಮ, ಸಂಸ್ಥೆಯ ಸಂಸ್ಥಾಪಕರಾದ ಪ್ರೊ.ಚನ್ನಾರಡ್ಡಿ ಪಾಟೀಲ ಅವರ ಮಾರ್ಗದರ್ಶನ, ಉಪನ್ಯಾಸಕರ ಗುಣಮಟ್ಟದ ಬೋಧನೆ, ನಿಯಮಿತವಾದ ಕಿರು ಪರೀಕ್ಷೆ ಹಾಗೂ ನ್ಯಾಯಮೂರ್ತಿ ಶಿವರಾಜ ಪಾಟೀಲರ ಪ್ರೇರಣೆ ಮತ್ತು ಮಾರ್ಗದರ್ಶನದಿಂದ ವಿದ್ಯಾರ್ಥಿ ಈ ಸಾಧನೆ ಮಾಡಲು ಸಾಧ್ಯವಾಗಿದೆ.