ರಾಜ್ಯಗಳಿಗೆ ಜನಸಂಖ್ಯೆ ಆಧರಿಸಿ ಲಸಿಕೆ

ನವದೆಹಲಿ, ಜೂ.೮- ಕೇಂದ್ರೀಕೃತ ಲಸಿಕಾ ಅಭಿಯಾನ ವನ್ನು ಈ ತಿಂಗಳ ೨೧ ರಿಂದ ಕೇಂದ್ರ ಸರ್ಕಾರ ಆರಂಭಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಲಸಿಕಾ ಅಭಿಮಾನದ ಮಾರ್ಗಸೂಚಿಯನ್ನು ಪರಿಷ್ಕರಣೆ ಮಾಡಿದೆ.
ಜನಸಂಖ್ಯೆ ಆಧಾರದ ಮೇಲೆ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಕೇಂದ್ರ ಸರ್ಕಾರ. ಉಚಿತವಾಗಿ ಲಸಿಕೆ ಪೂರೈಕೆ ಮಾಡಲಿದೆ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಹಂಚಿಕೆಯಾಗುವ ಲಸಿಕೆಯನ್ನು ವ್ಯರ್ಥವಾಗದಂತೆ ನೋಡಿಕೊಳ್ಳುವಂತೆ ನಿರ್ದೇಶನ ನೀಡಿದೆ.
ಜೂನ್ ೨೧ ರಂದು ೧೮ ವರ್ಷ ದಾಟಿದ ಎಲ್ಲರಿಗೂ ಉಚಿತ ಲಸಿಕೆ ನೀಡುವ ರಾಷ್ಟ್ರೀಯ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನು ಯಶಸ್ವಿಗೊಳಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಹಕಾರ ನೀಡಬೇಕು ಎಂದು ತಿಳಿಸಿದೆ.
ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯವಾಗಿರುವ ಲಸಿಕೆಯನ್ನು ಆಯಾ ರಾಜ್ಯಗಳ ಜನಸಂಖ್ಯೆಯ ಆಧಾರದ ಮೇಲೆ ಕೇಂದ್ರ ಸರ್ಕಾರವೇ ಪೂರೈಕೆ ಮಾಡಲಿದೆ ಹೀಗಾಗಿ ಪೂರೈಕೆಯಾಗುವ ಲಸಿಕೆಯನ್ನು ವ್ಯರ್ಥವಾಗದಂತೆ ಎಚ್ಚರಿಕೆಯಿಂದ ಬಳಸಬೇಕು ಎಂದು ಕೂಡ ಸೂಚಿಸಿದೆ.
ಲಸಿಕೆಯನ್ನು ವ್ಯರ್ಥ ಮಾಡಿದರೆ ಅದು ನಕಾರಾತ್ಮಕ ಪರಿಣಾಮವನ್ನು ಬೀರಲಿದೆ ಹೀಗಾಗಿ ಯಾವುದೇ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಒಂದು ಅನಿಸಿಕೆ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದೆ.
ದೇಶದಲ್ಲಿ ೧೮ ವರ್ಷ ದಾಟಿದ ಪ್ರತಿಯೊಬ್ಬರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಇದನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಮರ್ಪಕವಾಗಿ ಬಳಸಿಕೊಂಡು ತಮ್ಮ ತಮ್ಮ ರಾಜ್ಯಗಳಲ್ಲಿ ಅರ್ಹ ಜನರಿಗೆ ಲಸಿಕೆ ಹಾಕಲು ಮುಂದಾಗಬೇಕು ಎಂದು ನಿರ್ದೇಶನ ನೀಡಿದೆ.
ದೇಶದಲ್ಲಿ ಉತ್ಪಾದನೆಯಾಗುವ ಶೇಕಡ ೭೫ರಷ್ಟು ಲಸಿಕೆಯನ್ನು ರಾಜ್ಯ ಸರ್ಕಾರಗಳು ಮತ್ತು ಶೇಕಡ ೨೫ರಷ್ಟು ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಹಾಕಲು ಕೇವಲ ಡಿs.೧೫೦ ಸೇವಾ ಶುಲ್ಕವನ್ನು ಮಾತ್ರ ಪಡೆಯುವಂತೆ ಸೂಚನೆ ನೀಡಿರುವ ಕೇಂದ್ರ ಸರಕಾರ ಅದಕ್ಕೂ ಹೆಚ್ಚಿನ ಶುಲ್ಕ ಪಡೆದರೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ಔಷಧ ತಯಾರಿಕ ಕಂಪನಿ ನಿರ್ದಾರ
ಖಾಸಗಿ ಆಸ್ಪತ್ರೆಗಳಿಗೆ ಶೇಕಡ ೨೫ರಷ್ಟು ಲಸಿಕೆ ನೀಡಲು ಕೇಂದ್ರ ಸರ್ಕಾರ ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಲಸಿಕೆಗೆ ಎಷ್ಟು ದರ ನಿಗದಿ ಮಾಡಬೇಕು ಎನ್ನುವುದನ್ನು ಔಷಧ ತಯಾರಿಕಾ ಸಂಸ್ಥೆಗಳು ನಿರ್ಧಾರ ಮಾಡಲಿವೆ ಎಂದು ಕೂಡ ಕೇಂದ್ರ ಸರ್ಕಾರ ಹೇಳಿದೆ.
ಖಾಸಗಿ ಆಸ್ಪತ್ರೆಗಳು ಔಷಧ ತಯಾರಿಕಾ ಸಂಸ್ಥೆಗಳಿಂದ ನೇರವಾಗಿ ಲಸಿಕೆಯ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ.