ರಾಜ್ಯದಲಿ ನೈಟ್ ಲಾಕ್ ಇಲ್ಲ: ನೈಟ್ ಕರ್ಫೂ ಇಲ್ಲ

ಬೆಂಗಳೂರು, ಏ. 2- ರಾಜ್ಯದಲ್ಲಿ ಲಾಕ್ ಡೌನ್ , ರಾತ್ರಿ ಕರ್ಫ್ಯೂ ಇಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಇಂದು ಹೇಳಿದ್ದಾರೆ.
ರಾಜ್ಯದಲ್ಲಿ ‌ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಸೋಂಕು ತಡೆಗೆ ರಾತ್ರಿ ಕರ್ಫ್ಯೂ ಹೇರಲಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು.
ವಾಣಿಜ್ಯ ಚಟುವಟಿಕೆಗಳ ಮೇಲೂ ಯಾವುದೇ ನಿರ್ಬಂಧ ವಿಧಿಸಿಲ್ಲ.
ಬೀದರ್, ಕಲಬುರ್ಗಿ, ಮೈಸೂರು ಬೆಂಗಳೂರು ವಸೇರಿ ಹಲವು ಕಡೆಗಳಲ್ಲಿ ಸೋಂಕು ಹೆಚ್ಚಳವಾಗುತ್ರಿದ್ದು, ಸೋಂಕು ತಡೆಗೆ ಕ್ರಮ ವಹಿಸುವಂತೆ ನಿರ್ದೇಶನ ನೀಡಲಾಗಿದೆ.ಈ ಹಿನ್ನೆಲೆಯಲ್ಲಿ ಕೊರೊನಾ ತುರ್ತುಪರಿಸ್ಥಿತಿ ಘೋಷಿಸಲಾಗಿದೆ.
ರಾಜ್ಯದ ಖಾಸಗಿ ಆಸ್ಪತ್ರೆ ಗಳಲ್ಲಿ ಶೇ 20 ಹಾಸಿಗೆಗಳನ್ನು ಮೀಸಲಿಡಲು ಸೂಚನೆ ನೀಡಲಾಗಿದೆ. ಶಾಲೆಗಳನ್ನು ಭೌತಿಕವಾಗಿ ನಡೆಸದಿರಲು ತೀರ್ಮಾನಿಸಲಾಗಿದೆ.
ಹೆಚ್ಚು ಜನ ಇರುವ ಕಡೆ ಲಸಿಕೆ ನೀಡಲು
ಕ್ರಮ ಕೈಗೊಳ್ಳಲು ಮುಂದಾಗಿದೆ. ಕೈಗಾರಿಕೆ, ಐಟಿ ಮತ್ತು ಐಟಿ ಸಂಸ್ಥೆಗಳಲ್ಲಿ ಹೆಚ್ಚು ಜನರಿಗೆ ಲಸಿಕೆ ನೀಡಲು ಸರ್ಕಾರ ಸೂಚನೆ ನೀಡಿದೆ. ಈಗಾಗಲೇ ಜಾತ್ರೆ, ಧಾರ್ಮಿಕ ಉತ್ಸವಗಳನ್ನು ನಿಷೇಧಿಸಲಾಗಿದೆ ಎಂದು ರವಿಕುಮಾರ್ ತಿಳಿಸಿದ್ದಾರೆ.