ರಾಜ್ಯದಲ್ಲಿಂದು ಕೊರೊನಾ ಅಬ್ಬರ: 4225 ಜನರಿಗೆ ಸೋಂಕು, 26 ಸಾವು

ಬೆಂಗಳೂರು, ಮಾ. 31-  ರಾಜ್ಯದಲ್ಲಿ ಕೊರೋನಾ ಇಂದು ಆರ್ಭಟಿಸಿದೆ. ಕಳೆದ 24 ಗಂಟೆಗಳಲ್ಲಿ ಹೊಸ ಸೋಂಕು ಪ್ರಕರಣಗಳು ನಾಲ್ಕು ಸಾವಿರ ಗಡಿದಾಟಿದೆ ಬೆಂಗಳೂರು ನಗರದಲ್ಲಿ ಕರೋನ ಅಬ್ಬರ ಹೆಚ್ಚಾಗಿದ್ದು 24 ಗಂಟೆಗಳಲ್ಲಿ ಸೋಂಕಿತರ ಸಂಖ್ಯೆ ಮೂರು ಸಾವಿರ ಹತ್ತಿರ ಬಂದಿದೆ. ಸಾವನ್ನಪ್ಪುವವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ 24 ಗಂಟೆಗಳಲ್ಲಿ 26ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲೇ 18 ಸೋಂಕಿತರು ಒಂದೇ ದಿನ ಮೃತಪಟ್ಟಿದ್ದಾರೆ. ಉಳಿದಂತೆ ಕಲಬುರಗಿ ಮತ್ತು ತುಮಕೂರಿನಲ್ಲಿ ತಲಾ ಇಬ್ಬರು ಸೊಂಕಿತರು ಚಿಕ್ಕಮಗಳೂರು ಕೋಲಾರ ಉಡುಪಿ ಉತ್ತರ ಕನ್ನಡದಲ್ಲಿ ತಲಾ ಒಬ್ಬರು ಕೊರೊನ ಕಾರಣದಿಂದ ಸಾವನ್ನಪ್ಪಿದ್ದಾರೆ.

ಇಂದು ರಾಜ್ಯದಲ್ಲಿ 4225 ಕೋರೊನಾ ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,97,004ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 26 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,567ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಇಂದು 1492 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 956170ಕ್ಕೆ ಏರಿಕೆಯಾಗಿದೆ. ಇನ್ನು 28248 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 266 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 2928 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 434827ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 18 ಮಂದಿ ಬಲಿಯಾಗಿದ್ದಾರೆ ಬೆಂಗಳೂರಿನಲ್ಲಿ ಇದುವರೆಗೂ ಒಟ್ಟಾರೆ 4619 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಇಂದು879ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಬೆಂಗಳೂರಿನಲ್ಲಿ ಇದುವರೆಗೂ410594 ಸೋಂಕಿತರು ಗುಣಮುಖರಾಗಿದ್ದಾರೆ ಬೆಂಗಳೂರುನಲ್ಲಿ ಒಟ್ಟು19613 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾ ವಾರು ಸೊಂಕಿತರ ವಿವರ

ಬಾಗಲಕೋಟೆ 08, ಬಳ್ಳಾರಿ 68, ಬೆಳಗಾವಿ 39, ಬೆಂಗಳೂರು ಗ್ರಾಮಾಂತರ 80, ಬೀದರ್ 159, ಚಾಮರಾಜನಗರ 03, ಚಿಕ್ಕಬಳ್ಳಾಪುರ 11, ಚಿಕ್ಕಮಗಳೂರು 16, ಚಿತ್ರದುರ್ಗ 12, ದಕ್ಷಿಣ ಕನ್ನಡ 43, ದಾವಣಗೆರೆ 16, ಧಾರವಾಡ 62, ಗದಗ 14, ಹಾಸನ74, ಹಾವೇರಿ 01, ಕಲಬುರಗಿ 137, ಕೊಡಗು 18, ಕೋಲಾರ 20, ಕೊಪ್ಪಳ 20, ಮಂಡ್ಯ 39, ಮೈಸೂರ 142, ರಾಯಚೂರು 22, ರಾಮನಗರ 06, ಶಿವಮೊಗ್ಗ 31, ತುಮಕೂರು 138, ಉಡುಪಿ 56, ಉತ್ತರ ಕನ್ನಡ 37, ವಿಜಯಪುರ 15, ಯಾದಗಿರಿ 10.