ರಾಜ್ಯದಲ್ಲಿ ಅಶಾಂತಿ ಮತ್ತು ದೇಶದ್ರೋಹದ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘಟನೆಗಳನ್ನ ನಿಷೇಧಿಸುವಂತೆ ಆಗ್ರಹ

ವಿಜಯಪುರ, ಆ.1-ರಾಜ್ಯದಲ್ಲಿ ಅಶಾಂತಿ ಮತ್ತು ದೇಶದ್ರೋಹದ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘಟನೆಗಳನ್ನ ನಿಷೇಧಿಸುವಂತೆ ಆಗ್ರಹಿಸಿ ಎಬಿವಿಪಿ ವತಿಯಿಂದ ನಗರದ ಗಾಂಧಿಚೌಕ ದಿಂದ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನೆಯ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಸುರೇಖಾ ಕುಲಕರ್ಣಿ ಮಾತನಾಡಿ, ರಾಜ್ಯದಲ್ಲಿ ಸರಣಿ ಕೊಲೆ ಪ್ರಕರಣಗಳು ನಡೆಯುತ್ತಿದ್ದು ಸಮಾಜದಲ್ಲಿ ನಾಗರಿಕರು ಭಯಪಟ್ಟು ಬದುಕುವಂತಹ ವಾತಾವರಣ ನಿರ್ಮಾಣವಾಗುತ್ತಿದೆ ಕರ್ನಾಟಕ ರಾಜ್ಯದಲ್ಲಿ ಪದೇ ಪದೇ ಒಂದು ಸಿದ್ಧಾಂತದ ಪರವಾಗಿ ಕೆಲಸ ಮಾಡುವ ಕಾರ್ಯಕರ್ತರನ್ನು ಕೊಲೆ ಮಾಡುತ್ತಿರುವುದು ಖಂಡನೀಯ ಸಂಗತಿ ಎಂದು ಆಕ್ರೋಶ ಹೊರಹಾಕಿದರು.
ಎಬಿವಿಪಿ ನಗರ ಕಾರ್ಯದರ್ಶಿ ಸಿದ್ದು ಪತ್ತಾರ ಮಾತನಾಡಿ, ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಸಾಮಾಜಿಕ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಮಾಡಿರುವುದು ಕರ್ನಾಟಕದ ಜನತೆ ಎಷ್ಟು ಅಭದ್ರತೆಯಲ್ಲಿ ಜೀವನ ನಡೆಸುತ್ತಿದ್ದಾರೆ ಎಂಬುದಕ್ಕೆ ನಿದರ್ಶನವಾಗಿದೆ. ರಾಜ್ಯದಲ್ಲಿ ಪದೇ ಪದೇ ಒಂದು ಸಿದ್ಧಾಂತದ ಪರವಾಗಿ ರಾಷ್ಟ್ರೀಯತೆಯ ವಿಚಾರಧಾರೆಯನ್ನು ಇಟ್ಟುಕೊಂಡು ಕೆಲಸ ಮಾಡುವ ಕಾರ್ಯಕರ್ತರ ಹತ್ಯೆ ಮಾಡುತ್ತಿರುವುದರ ಹಿಂದೆ PಈI, ಅಈI ಮತ್ತು SಆPI ಸಂಘಟನೆಗಳ ಬೆಂಬಲ ಇರುವುದು ಎಲ್ಲ ಪ್ರಕರಣಗಳಲ್ಲಿ ಕಂಡು ಬರುತ್ತಿದ್ದು, ಸರ್ಕಾರವು ಕೂಡಲೇ ಈ ಸಂಘಟನೆಗಳನ್ನ ಬ್ಯಾನ್ ಮಾಡಬೇಕೆಂದು ಎಬಿವಿಪಿಯು ಆಗ್ರಹಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಾಗರಾಜ ಬಟಗೇರಾ, ಜಿಲ್ಲಾ ಸಂಚಾಲಕ ಅಕ್ಷಯ ಯಾದವಾಡ, ತಾಲೂಕು ಸಹಸಂಚಾಲಕ ಮಹಾಂತೇಶ ಕಂಬಾರ, ಮಂಜುನಾಥ ಹಳ್ಳಿ, ಸಿದ್ದು ಉಪ್ಪಾರ, ಪಾಂಡು ಮೋರೆ, ಆಕಾಶ ರಂಜಣಗಿ, ಸಂದೀಪ್ ಅರಳಗುಂಡಿ, ಸೋನು ನಾಯಕ್À, ಅನಿಲ ಕುಂಬಾರ, ಬಾಲಾಜಿ ಬೀದರ್, ಗಣೇಶ ಕೋಂತಿಕಲ್ಲ, ಸೌಮ್ಯ ಪಾಟೀಲ, ಭಾರ್ಗವಿ, ಪವಿತ್ರಾ ಸೇರಿದಂತೆ ಇತರರಿದ್ದರು.