ರಾಜ್ಯದಲ್ಲಿ ಇಂದು ಕೊರೊನಾ ಭಾರಿ ಏರಿಕೆ; 2010 ಜನರಿಗೆ ಸೋಂಕು, 5 ಸಾವು

ಬೆಂಗಳೂರು, ಮಾ.23- ರಾಜ್ಯದಲ್ಲಿ ಕೊರೋನಾ ಸೋಂಕಿನ ಆರ್ಭಟ ಹೆಚ್ಚಾಗುತ್ತಿದ್ದು ಇಂದೂ ಕೊರೊನಾ ಬಾರಿ ಏರಿಕೆಯಾಗಿದೆ ನಾಲ್ಕು ತಿಂಗಳ ನಂತರ ಮತ್ತೆ ಪ್ರಕರಣಗಳು ಎರಡುಸಾವಿರ ಗಡಿದಾಟಿದೆ ಬೆಂಗಳೂರು ನಗರದಲ್ಲಿ ಹೊಸ ಪ್ರಕರಣಗಳು ಸಾವಿರದ ಗಡಿ ದಾಟಿದೆ.

ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 5 ಸೋಂಕಿತ ರು ಮೃತಪಟ್ಟಿದ್ದು ಬೆಂಗಳೂರು ನಗರ ದಲ್ಲಿ3ಮಂದಿ ಹಾಸನ ಮತ್ತು ಕಲಬುರ್ಗಿಯಲ್ಲಿ ತಲಾ ಒಬ್ಬರು ಕೊರನಾದಿಂದ ಮೃತಪಟ್ಟಿದ್ದಾರೆ.
ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಮರಣ ಸಂಭವಿಸಿಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15 ಸಾವಿರ ಗಡಿದಾಟಿದೆ.

ಇಂದು ರಾಜ್ಯದಲ್ಲಿ2010 ಜನರಿಗೆಸೊಂಕು ದೃಢ ಪಟ್ಟಿದೆ. ಇಂದು677ಸೋಂಕಿತರು ಗುಣಮುಖರಾಗಿದ್ದಾರೆ ಹಾಗೆಯೇ 05 ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ973657ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು945594 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ. ಮತ್ತು ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 15595ಸಕ್ರಿಯ ಸೋಂಕು ಪ್ರಕರಣಗಳಿವೆ. ಸೋಂಕಿನಿಂದ ಈವರೆಗೆ 12449 ಜನ ಸಾವಿಗೀಡಾಗಿದ್ದಾರೆ.
ರಾಜ್ಯದಲ್ಲಿ 136 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 1280 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 419838ಕ್ಕೆ ಏರಿಕೆಯಾಗಿದೆ.
ನಗರದಲ್ಲಿ ಕಳೆದ24ಗಂಟೆಗಳಲ್ಲಿ ಸೊಂಕಿಗೆ 3 ಸೋಂಕಿತರು ಬಲಿಯಾಗಿದ್ದು , ಬೆಂಗಳೂರಿನಲ್ಲಿ ಒಟ್ಟಾರೆ ಸಾವಿನ ಸಂಖ್ಯೆ4556ಕ್ಕೆ ಏರಿಕೆಯಾಗಿದೆ.
ಇಂದು399 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಬೆಂಗಳೂರಿನಲ್ಲಿ ಇದುವರೆಗೂ404515 ಸೋಂಕಿತರು ಗುಣಮುಖರಾಗಿದ್ದಾರೆ ಬೆಂಗಳೂರುನಲ್ಲಿ ಒಟ್ಟು10766 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾ ವಾರು ಸೊಂಕಿತರ ವಿವರ

ಬಾಗಲಕೋಟೆ 06, ಬಳ್ಳಾರಿ 39, ಬೆಳಗಾವಿ16, ಬೆಂಗಳೂರು ಗ್ರಾಮಾಂತರ36, ಬೀದರ್ 76, ಚಾಮರಾಜನಗರ 00, ಚಿಕ್ಕಬಳ್ಳಾಪುರ 08, ಚಿಕ್ಕಮಗಳೂರು 10, ಚಿತ್ರದುರ್ಗ 07, ದಕ್ಷಿಣ ಕನ್ನಡ 74, ದಾವಣಗೆರೆ 06, ಧಾರವಾಡ 17, ಗದಗ 05, ಹಾಸನ 24, ಹಾವೇರಿ 04, ಕಲಬುರಗಿ 129, ಕೊಡಗು 19, ಕೋಲಾರ 07, ಕೊಪ್ಪಳ 08, ಮಂಡ್ಯ 11, ಮೈಸೂರು 100, ರಾಯಚೂರು 14, ರಾಮನಗರ 03, ಶಿವಮೊಗ್ಗ 23, ತುಮಕೂರು 40, ಉಡುಪಿ28, ಉತ್ತರ ಕನ್ನಡ 06, ವಿಜಯಪುರ 12, ಯಾದಗಿರಿ 02.