ರಾಜ್ಯದಲ್ಲಿ ಇಂದು 9579 ಜನರಿಗೆ ಸೋಂಕು, 52ಸಾವು

ಬೆಂಗಳೂರು, ಏ.12- ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು ಇಂದೂ  ಸೋಂಕು ಪ್ರಕರಣಗಳು 10 ಸಾವಿರ ಸನಿಹದಲ್ಲಿದೆ. ಹಾಗೆಯೇ ಸಾವನ್ನಪ್ಪುವವರ ಸಂಖ್ಯೆಯಲ್ಲೂ ಭಾರೀ ಏರಿಕೆಯಾಗಿದೆ ಕಳೆದ 24 ಗಂಟೆಗಳಲ್ಲಿ 52 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದ್ದು, ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 6387 ಜನರಲ್ಲಿ ಸೋಂಕು ಪತ್ತೆಯಾಗಿವೆ.
ರಾಜ್ಯದಲ್ಲಿ ಬರೋಬ್ಬರಿ9579 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,74,869ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 52 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,941ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 6387 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,88369ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 40 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿಇಂದು2767ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,85,924ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 75,985 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 470 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರ ದಲ್ಲಿ40 ಮಂದಿ ಮೃತಪಟ್ಟಿದ್ದಾರೆ. ಮೈಸೂರು ನಗರದಲ್ಲಿ ಮೂವರು ಕೊರೋನಾ ಕಾರಣದಿಂದ ಸಾವನ್ನಪ್ಪಿದ್ದಾರೆ. ಹಾಗೆಯೇ ಬೀದರ್ ಚಾಮರಾಜನಗರ ತಲಾ ಇಬ್ಬರು , ಬಾಗಲಕೋಟೆ ಬೆಳಗಾವಿ ಬಳ್ಳಾರಿ ಚಿಕ್ಕಬಳ್ಳಾಪುರ ರಾಮನಗರ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.
ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಮರಣ ಸಂಭವಿಸಿಲ್ಲ.
ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ1038 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಬೆಂಗಳೂರಿನಲ್ಲಿ ಇದುವರೆಗೂ426968 ಸೋಂಕಿತರು ಗುಣಮುಖರಾಗಿದ್ದಾರೆ ಬೆಂಗಳೂರುನಲ್ಲಿ ಒಟ್ಟ56545 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾ ವಾರು ಸೊಂಕಿತರ ವಿವರ

ಬಾಗಲಕೋಟೆ 55,ಬಳ್ಳಾರಿ 132, ಬೆಳಗಾವಿ 39, ಬೆಂಗಳೂರು ಗ್ರಾಮಾಂತರ 192, ಬೀದರ್ 465,, ಚಾಮರಾಜನಗರ 39, ಚಿಕ್ಕಬಳ್ಳಾಪುರ 120, ಚಿಕ್ಕಮಗಳೂರು 57 ಚಿತ್ರದುರ್ಗ 22, ದಕ್ಷಿಣ ಕನ್ನಡ 73, ದಾವಣಗೆರೆ 40, ಧಾರವಾಡ 91, ಗದಗ 29, ಹಾಸನ 113, ಹಾವೇರಿ 36, ಕಲಬುರಗಿ 335, ಕೊಡಗು 24, ಕೋಲಾರ 96, ಕೊಪ್ಪಳ 31, ಮಂಡ್ಯ 86, ಮೈಸೂರು 362, ರಾಯಚೂರು 70, ರಾಮನಗರ 64, ಶಿವಮೊಗ್ಗ 43, ತುಮಕೂರು 239, ಉಡುಪಿ 101, ಉತ್ತರ ಕನ್ನಡ 64, ವಿಜಯಪುರ 122, ಯಾದಗಿರಿ 52.