ರಾಜ್ಯದಲ್ಲಿ ಇಬ್ಬರು ಸಿಎಂ ಇದ್ದಾರೆ:ಸಿದ್ದರಾಮಯ್ಯ ಲೇವಡಿ

ಚಿತ್ರದುರ್ಗ: ರಾಜ್ಯದಲ್ಲಿ ಇಬ್ಬರು ಸಿಎಂ ಇದ್ದಾರೆ, ಅದರಲ್ಲಿ ವಿಜಯೇಂದ್ರ ಡಿ ಫ್ಯಾಕ್ಟರ್ ಸಿಎಂ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದರು.
ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಮಗ ವಿಜಯೇಂದ್ರ ಅಧಿಕಾರಿಗಳ ಮೇಲೆ ನಡೆಸುತ್ತಿರುವ ದರ್ಪ ಹಾಗೂ ಶಾಸಕರ ಮೇಲೆ ಹಿಡಿತ ಸಾಧಿಸಬೇಕೆಂಬ ಉಂಬತನ ನೋಡಿದರೆ ಅವರು ರಾಜ್ಯದಲ್ಲಿ ಮತ್ತೊಬ್ಬ ಸಿಎಂ ಆಗಿದ್ದಾರೆ ಎಂದರು.
ರಾಜ್ಯದ ಹಣಕಾಸು ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಸಂಬಳ ಕೊಡಲು ಹಣವಿಲ್ಲ ಇವರುಗಳು ಎಂತಹ ಸರ್ಕಾರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.
ಉಪಚುನಾವಣೆಯಲ್ಲಿ ಹಣ ಖರ್ಚು ಮಾಡದೆ ಗೆಲುವಿನ ಸಮೀಪ ಬಂದಿದ್ದೇವೆ ಎಂಬ ಹೆಚ್.ಡಿ.ಕೆ ಹೇಳಿಕೆ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಹೆಚ್.ಡಿ.ಕೆ ಯಾವಾಗಲೂ ಸತ್ಯಹರಿಶ್ಚಂದ್ರ, ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ಲೇವಡಿ ಮಾಡಿದರು.
ಬಿಜೆಪಿ ರಾಜ್ಯಧ್ಯಕ್ಷನಳೀನ್ ಕುಮಾರ್ ಕಟೀಲ್ ಕುರಿತು ಪ್ರತಿಕ್ರಿಯೇ ನೀಡಿದ ಅವರು ಕಟೀಲ್ ಒಬ್ಬ ಮೇಚ್ಯೂರಿಟಿ ಇಲ್ಲದ ವ್ಯಕ್ತಿ ಅಂತಹವರ ಬಗ್ಗೆ ನಾನೇಕೆ ಮಾತಾಡಲಿ ಎಂದರು.
ವಿನಯ್ ಕುಲಕರ್ಣಿ ವಿಚಾರಣೆ ರಾಜಕೀಯ ಪ್ರೇರಿತವಾಗಿದೆ. ಅವರ ಜೊತೆ ನಾನೂ ಮಾತನಾಡಿದ್ದೇನೆ. ನಾನು ಏನೂ ತಪ್ಪು ಮಾಡಿಲ್ಲ ಎಂದು ನನ್ನ ಬಳಿ ವಿನಯ್ ಕುಲಕರ್ಣಿ ಹೇಳಿದ್ದಾನೆ. ವಿಚಾರಣೆ ಹಂತದಲ್ಲಿರುವಾಗ ನಾನು ಏನೂ ಹೇಳುವುದಿಲ್ಲ ಎಂದು ಹೇಳಿದರು.
ಕೊರೊನಾಗೆ ವ್ಯಾಕ್ಸಿನ್ ಬರುವ ತನಕ ಗ್ರಾ.ಪಂ ಚುನಾವಣೆ ಅಗತ್ಯವಿಲ್ಲ ಮತ್ತು ಶಾಲಾ ಕಾಲೇಜುಗಳ ಪುನರಾರಂಭ ಮಾಡವುದು ಸೂಕ್ತವಲ್ಲ. ಎಲ್ಲಾ ವಿದ್ಯಾರ್ಥಿಗಳನ್ನು ಈ ಬಾರಿ ಪಾಸ್ ಮಾಡಬೇಕು ಎಂದರು.
ಸದ್ಯ ಇದೀಗ ಕೊರೊನಾ ಸಂಕಷ್ಟದ ಕಾಲದಲ್ಲಿ ವಿದ್ಯುತ್ ದರ ಏರಿಕೆ ಮಾಡಬಾರದು ಎಂದು ಸಲಹೆ ನೀಡಿದರು.
ಈ ವೇಳೆ ಶಾಸಕ ರಘುಮೂರ್ತಿ, ವಿಧಾನ ಪರಿಷತ್ ಸದಸ್ಯ‌ ರಘುಚಾರ್, ಮಾಜಿ ಸಚಿವ ಡಿ.ಸುಧಾಕರ್, ಕಾಂಗ್ರೇಸ್ ಜಿಲ್ಲಾಧ್ಯಕ್ಷ ತಾಜ್ ಪೀರ್, ಬಿ.ಟಿ.ಜಗದೀಶ್ ಸೇರಿದಂತೆ ಇತರರು ಹಾಜರಿದ್ದರು.