ರಾಜ್ಯದಲ್ಲಿ ಈ ವರ್ಷ 154 ಲಕ್ಷ ಟನ್ ಆಹಾರ ಧಾನ್ಯ ಉತ್ಪಾದನೆ

ಬೆಂಗಳೂರು, ಏ.22- ರಾಜ್ಯದಲ್ಲಿ ಕೊರೋನಾ ಸೋಂಕಿನ ನಡುವೆಯೂ 2020- 21 ರಲ್ಲಿ ಆಹಾರ ಧಾನ್ಯಗಳ ಉತ್ಪಾದನೆ ದಾಖಲೆಯ ಏರಿಕೆ ಕಂಡಿದೆ.

ಈ ವರ್ಷದಲ್ಲಿ 154 ಲಕ್ಷ‌ ಟನ್ ಆಹಾರ ಧಾನ್ಯ ಉತ್ಪಾದನೆಯಾಗಿದೆ ಎಂದು ರಾಜ್ಯ ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

2019-20 ರಲ್ಲಿ 141 ಲಕ್ಷ ಟನ್ ಆಹಾರ ಧಾನ್ಯ ಉತ್ಪಾದನೆ ಹೇಗಿತ್ತು ಈ ಬಾರಿ ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆಯಾಗಿದೆ.

ರಾಜ್ಯದಲ್ಲಿ ಸರಾಸರಿ ವರ್ಷಕ್ಕೆ 115ಲಕ್ಷ ಟನ್ ಆಹಾರ ಉತ್ಪಾದನೆಯಾಗಲಿದೆ ಈ ಬಾರಿ ಶೇಕಡಾ 30 ರಷ್ಟು ಹೆಚ್ಚಾಗಿದೆ.

ಈ ಪೈಕಿ 132 ಲಕ್ಷಟನ್ ಮೊದಲ ಧಾನ್ಯಗಳಿಗೆ.13 ಲಕ್ಷ ಎಣ್ಣೆ ಕಾಳು ಉತ್ಪಾದನೆಯಾಗಿದೆ ಎಂದು ತಿಳಿಸಲಾಗಿದೆ.

ಅದರಲ್ಲಿಯೂ ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ದಾಖಲೆಯ ಆಹಾರ ಉತ್ಪಾದನೆಯಾಗಿದೆ ಎಂದು ರಾಜ್ಯ ಕೃಷಿ ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್ ಹೇಳಿದ್ದಾರೆ

50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಖುಷ್ಕಿ ಪ್ರದೇಶದಲ್ಲಿ ಬೆಳೆದ ಬೆಳೆಯಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷಕ್ಕೆ ಹೆಚ್ಚಾಗಿದೆ‌.ಇದು ಆಶಾದಾಯಕ ಬೆಳವಣಿಗೆಯಾಗಿದೆ.
ಕಾರ್ಮಿಕ ಅಭಾವದ ನಡುವೆಯೂ ಆಹಾರ ಧಾನ್ಯ ಉತ್ಪಾದನೆ ಹೆಚ್ಚಳವಾಗಿದೆ.