ರಾಜ್ಯದಲ್ಲಿ ಚಳಿ ಹೆಚ್ಚಳ

ಬೆಂಗಳೂರು, ಡಿ ೭- ಮಳೆ ಅಬ್ಬರ ಕಡಿಮೆಯಾಗುತ್ತಿದ್ದಂತೆ ಚುಮುಚುಮು ಚಳಿ ಶುರುವಾಗಿದೆ.
ಚಳಿ ಹೆಚ್ಚಳ
ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮಳೆ ಅಬ್ಬರ ತಣ್ಣಗಾಗಿದ್ದು, ಚಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಯಲು ಸೀಮೆಯಲ್ಲಿ ಮೋಡ ಮುಸುಕಿದ ವಾತಾವರಣದಿಂದ ಹೊರ ಬಂದಿದೆ. ಆದ್ರೆ ಅಲ್ಲಲ್ಲಿ ಕೆಲವು ಭಾಗಗಳಲ್ಲಿ ಅಕಾಲಿಕ ಮಳೆಯಾಗಿದೆ.
ರಾಜ್ಯದಲ್ಲಿ ಒಣ ಹವೆ ಮುಂದುವರಿದ್ದು, ಆಗಸದಲ್ಲಿ ಬೆಳ್ಳಿ ಮೋಡಗಳ ಓಡಾಟ ಹೆಚ್ಚಿದೆ. ಎಂದಿನಂತೆ ಮಲೆನಾಡು ಭಾಗದಲ್ಲಿ ಮೋಡ ಕವಿದ ವಾತಾವರಣದ ಜೊತೆ ತುಂತುರು ಮಳೆ ಇರಲಿದೆ. ಕರ್ನಾಟದ ದಕ್ಷಿಣ ಒಳನಾಡಿನಲ್ಲಿ ಮಳೆಯ ಇರಲಿದ್ದು, ಚಳಿ ಸಹ ಹೆಚ್ಚಾಗಲಿದೆ.
ಜವಾದ್ ಚಂಡಮಾರುತ ತೀವ್ರತೆ ಕಳೆದುಕೊಂಡು ವಾಯುಭಾರ ಕುಸಿತವಾಗಿದ್ದು ಅದರ ಪರಿಣಾಮವಾಗಿ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದೆ. ಡಿ. ೮ರವರೆಗೆ ಅಸ್ಸಾಂ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಮಣಿಪುರ ಮತ್ತು ತ್ರಿಪುರಾಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.