ರಾಜ್ಯದಲ್ಲಿ ಡಿ . ಆರ್. ಡಿ.ಒ. ಕೋವಿಡ್ ಕೇಂದ್ರ ಪ್ರಾರಂಭಿಸಲು ರಕ್ಷಣಾ ಸಚಿವರಿಗೆ ಡಿಸಿಎಂ ಸವದಿ ಮನವಿ

ರಾಯಚೂರು ಮೇ 18:- ಕರ್ನಾಟಕದಲ್ಲಿ ಕೋವಿಡ್-19 ಅಪಾಯಕಾರಿ ಪ್ರಮಾಣದಲ್ಲಿ ಹೆಚ್ಚಿರುವುದರಿಂದ ಇಲ್ಲಿನ ಆಸ್ಪತ್ರೆಗಳಲ್ಲಿ ರೋಗಿಗಳ ದಟ್ಟಣೆ ಅಧಿಕವಾಗಿ, ವೈದ್ಯರುಗಳ ಮೇಲೆ ಒತ್ತಡ ತೀವ್ರವಾಗಿದ್ದರಿಂದ ರಾಜ್ಯದಲ್ಲಿ ಆದಷ್ಟು ಶೀಘ್ರವಾಗಿ ಸುಸಜ್ಜಿತ
ಕೇಂದ್ರದ ರಕ್ಷಣಾ ಇಲಾಖೆಯ ಡಿ. ಆರ್. ಡಿ. ಒ.
ಕೋವಿಡ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸುವುದು ಸೂಕ್ತವೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಪತ್ರದ ಮೂಲಕ ರಾಜ್ಯ ಉಪ ಮುಖ್ಯ ಮಂತ್ರಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಮಂತ್ರಿ ಲಕ್ಷಣ ಸವದಿ ಅವರು ಮನವಿ ಮಾಡಿದ್ದಾರೆ.
ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಸ್ವಾಮ್ಯದಲ್ಲಿ ಸಾಕಷ್ಟು ಖಾಲಿ ಸ್ಥಳ ಲಭ್ಯವಿದೆ. ಇದನ್ನು ಬಳಕೆ ಮಾಡಿಕೊಂಡು ರಕ್ಷಣಾ ಇಲಾಖೆಯಿಂದ ತಕ್ಷಣವೇ ಕೋವಿಡ್ ಕೇಂದ್ರಗಳನ್ನು ಪ್ರಾರಂಭಿಸಿದರೆ ಸಾಕಷ್ಟು ರೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.
ದೇಶದ ನಾಲ್ಕು ಕಡೆಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಡಿ. ಆರ್. ಡಿ. ಒ. ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ತೆರೆದ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಕೂಡ ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸುವಂತೆ ಮನವಿ ಮಾಡಿದ್ದಾರೆ.
ದೆಹಲಿ, ವಾರಣಾಸಿ, ಅಹಮದಾಬಾದ್, ಮತ್ತು ಲಖನೋಗಳಲ್ಲಿ ಡಿ.ಆರ್. ಡಿ. ಒ. ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸುವುದಕ್ಕೆ ಕೇಂದ್ರದ ರಕ್ಷಣಾ ಸಚಿವರ ಕ್ರಮ ಸ್ವಾಗತಿಸಿದ್ದಾರೆ.
ಈ ಬಗ್ಗೆ ಆದ್ಯತೆಯ ಮೇರೆಗೆ ಕ್ರಮಕೈಗೊಳ್ಳಬೇಕೆಂದು ಸವದಿಯವರು ರಕ್ಷಣಾ ಸಚಿವರಲ್ಲಿ ಕೋರಿಕೊಂಡಿದ್ದಾರೆ.