ರಾಜ್ಯದಲ್ಲಿ ದಾಖಲೆ ಬರೆದ ಕೊರೊನಾ ಒಂದೇ ದಿನ 14 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು

ಬೆಂಗಳೂರು, ಏ.15- ರಾಜ್ಯದಲ್ಲಿ ಇಂದೂ ಕೊರೊನಾ ಬಾರಿ ಏರಿಕೆಯಾಗಿದ್ದು ಕಳೆದ ಒಂದು ವರ್ಷದಿಂದ ಕಂಡು ಕೇಳರಿಯದಷ್ಟು ದಾಖಲಾಗಿವೆ. ರಾಜ್ಯದಲ್ಲಿ ಒಂದೇ ದಿನ 14ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ತಗುಲಿರುವುದು ಇದೇ ಮೊದಲು. ರಾಜ್ಯದ ಮಟ್ಟಿಗೆಇದು ದಾಖಲೆ.
ಹಿಂದೆಂದೂ ಇಷ್ಟು ದೊಡ್ಡ ಪ್ರಮಾಣದಲ್ಲಿ ರಾಜ್ಯದಲ್ಲಿ ಕರೋನ ಪ್ರಕರಣ ವರದಿಯಾಗಿರಲಿಲ್ಲ. ರಾಜಧಾನಿ ಬೆಂಗಳೂರು ನಗರದಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು ಹೊಸ ಸೋಂಕು ಪ್ರಕರಣಗಳ ಸಂಖ್ಯೆ 10 ಸಾವಿರ ಗಡಿ ದಾಟಿದೆ ಇಂದು ಸಾವಿಗೀಡಾಗಿರುವ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 66 ಮಂದಿ ಸೋಂಕಿತರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಬೆಂಗಳೂರು ನಗರ ಒಂದರಲ್ಲೇ 30 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರದಲ್ಲಿ 6ಮಂದಿ , ಮೈಸೂರಿನಲ್ಲಿ ಐವರು ಹಾಸನದಲ್ಲಿ ನಾಲ್ವರು ,ಧಾರವಾಡದಲ್ಲಿ ಮೂವರು, ಬೀದರ್ ,ತುಮಕೂರು, ಉತ್ತರಕನ್ನಡ ,ತಲಾ ಇಬ್ಬರು ಬೆಳಗಾವಿ ಕಲ್ಬುರ್ಗಿಯಲ್ಲಿ ಕೋಲಾರ ರಾಮನಗರ ಶಿವಮೊಗ್ಗ ವಿಜಯಪುರ ತಲಾ ಒಬ್ಬರು ಕೊರನಾದಿಂದ ಮೃತಪಟ್ಟಿದ್ದಾರೆ.
ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಮರಣ ಸಂಭವಿಸಿಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಹತ್ತಿರ ಒಂದು ಲಕ್ಷದಷ್ಟಿದೆ.
ಇಂದು ರಾಜ್ಯದಲ್ಲಿ14738 ಜನರಿಗೆಸೊಂಕು ದೃಢ ಪಟ್ಟಿದೆ.
ಇಂದು3591ಸೋಂಕಿತರು ಗುಣಮುಖರಾಗಿದ್ದಾರೆ ಹಾಗೆಯೇ 66 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ1109650ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು999958 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ. ಮತ್ತು ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 96561 ಸಕ್ರಿಯ ಸೋಂಕು ಪ್ರಕರಣಗಳಿವೆ. ಸೋಂಕಿನಿಂದ ಈವರೆಗೆ 13112 ಜನ ಸಾವಿಗೀಡಾಗಿದ್ದಾರೆ.
ರಾಜ್ಯದಲ್ಲಿ 555 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 10497ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 512521ಕ್ಕೆ ಏರಿಕೆಯಾಗಿದೆ.
ನಗರದಲ್ಲಿ ಕಳೆದ24ಗಂಟೆಗಳಲ್ಲಿ ಸೊಂಕಿಗೆ 30 ಸೋಂಕಿತರು ಬಲಿಯಾಗಿದ್ದು , ಬೆಂಗಳೂರಿನಲ್ಲಿ ಒಟ್ಟಾರೆ ಸಾವಿನ ಸಂಖ್ಯೆ4963ಕ್ಕೆ ಏರಿಕೆಯಾಗಿದೆ.
ಇಂದು1807ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಬೆಂಗಳೂರಿನಲ್ಲಿ ಇದುವರೆಗೂ435730 ಸೋಂಕಿತರು ಗುಣಮುಖರಾಗಿದ್ದಾರೆ ಬೆಂಗಳೂರುನಲ್ಲಿ ಒಟ್ಟು71827 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾ ವಾರು ಸೊಂಕಿತರ ವಿವರ

ಬಾಗಲಕೋಟೆ 29, ಬಳ್ಳಾರಿ 200, ಬೆಳಗಾವಿ 135, ಬೆಂಗಳೂರು ಗ್ರಾಮಾಂತರ 171, ಬೀದರ್363, ಚಾಮರಾಜನಗರ 39, ಚಿಕ್ಕಬಳ್ಳಾಪುರ 127, ಚಿಕ್ಕಮಗಳೂರು 62, ಚಿತ್ರದುರ್ಗ 33, ದಕ್ಷಿಣ ಕನ್ನಡ 166, ದಾವಣಗೆರೆ 60, ಧಾರವಾಡ 179, ಗದಗ 34, ಹಾಸನ 186, ಹಾವೇರಿ 27, ಕಲಬುರಗಿ 624, ಕೊಡಗು 66, ಕೋಲಾರ89, ಕೊಪ್ಪಳ 118, ಮಂಡ್ಯ 211, ಮೈಸೂರ 327, ರಾಯಚೂರು 48, ರಾಮನಗರ 62, ಶಿವಮೊಗ್ಗ 74, ತುಮಕೂರು 387, ಉಡುಪಿ 111, ಉತ್ತರ ಕನ್ನಡ 89, ವಿಜಯಪುರ 136, ಯಾದಗಿರಿ 88.