ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ

ಬೆಂಗಳೂರು,ನ.16- ನಗರದಲ್ಲಿ ಇಂದು ಬೆಳಿಗ್ಗೆ ಯಿಂದ ಮಳೆಯಾಗುತ್ತಿದ್ದು ದೀಪಾವಳಿಯ ಸಂಭ್ರಮದಲ್ಲಿ ಪಟಾಕಿ ಸಿಡಿಸುವವರ ಆಸೆಗೆ ತಣ್ಣೀರೆರಚಿದಂತಾಗಿದೆ. ನಗರದ ಕುಮಾರಸ್ವಾಮಿ ಲೇಔಟ್, ಮೆಜೆಸ್ಟಿಕ್ ಸೇರಿದಂತೆ ನಗರದ ಬಹುತೇಕ ಹ ಕಡೆ ಸಾಧಾರಣ ಹಾಗೂ ಭಾರೀ ಮಳೆಯಾಗಿದೆ.
ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾದರೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಮಳೆ ಮುಂದುವರೆದಿದ್ದು, ಸಂಜೆಯಾಗುತ್ತಿದ್ದಂತೆ ಮಳೆ ಧಾರಾಕಾರವಾಗ ಸುರಿಯಲಾರಂಭಿಸಿದೆ. ಮಳೆಯಿಂದಾಗಿ ದೀಪಾವಳಿ ಸಂಭ್ರಮಕ್ಕೆ ಅಡ್ಡಿಯುಂಟಾಗಿದೆ. ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿದ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ನವೆಂಬರ್ 17 ಮತ್ತು 18 ರಂದು ಮಳೆ ಪ್ರಮಾಣ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ.