ರಾಜ್ಯದಲ್ಲಿ ನೆರೆ ರಾಷ್ಟ್ರೀಯ ವಿಪತ್ತು ಘೋಣೆಗೆ ಸಿದ್ದು ಆಗ್ರಹ

ಬೆಂಗಳೂರು, ಅ 17- ರಾಜ್ಯದಲ್ಲಿ ಸುರಿದ ಭಾರೀ ಮಖೆಯಿಂದಾಗಿ ಭಾರೀ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ಹಾನಿ ಸಂಭವಿಸಿದ್ದು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ವಿಧಾನಸಭೆಯ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಸತತ ಮಳೆಯಾಗುತ್ತಿದೆ. ಕಂದಾಯ ಸಚಿವ ಅಶೋಕ್ ಅವರು ಕಾಟಾಚಾರಕ್ಕೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ ಎಂದು ಟೀಕಿಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ಕೊಟ್ಟಿಲ್ಲ. ರಸ್ತೆ, ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಏನು ಮಾಡುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ರಾಜ್ಯದಲ್ಲಿ 26 ಮಂದಿ ಲೋಕಸಭಾ ಸದಸ್ಯರಿದ್ದರೂ ಯಾವುದೃ ಪ್ರಯೋಜನವಿಲ್ಲ. ಒಂದು ಬಾರಿಯಾದರೂ ಕೇಂದ್ರ ಬಳಿ ಹೋಗಿ ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ಪ್ರಧಾನಿಯವರ ಗಮನಕ್ಕೆ ತಂದಿದ್ದಾರ ಎಂದು ಖಾರವಾಗಿ ಪ್ರಶ್ನಿಸಿದರು.
ಎಲ್ಲದಕ್ಕೂ ಕೋಲೆ ಬಸವನ ರೀತಿಯಲ್ಲಿ ಸಂಸದರು ತಲೆ‌ ಅಲ್ಲಾಡಿಸುತ್ತಾರೆ ಎಂದು ವ್ಯಂಗ್ಯ ವಾಡಿದ ಅವರು, ಪ್ರಧಾನಿಯವರು ಕನ್ನಡದಲ್ಲಿ ಟ್ವೀಟ್ ಮಾಡಿದ ಮಾತ್ರ ರಾಜ್ಯದ ಪರ ಇದ್ದಾರೆ ಎಂದಲ್ಲ ಎಂದು ಮೂದಲಿಸಿದರು.