ರಾಜ್ಯದಲ್ಲಿ ಮಂಗನ ಕಾಯಿಲೆ ಪತ್ತೆಯಾಗಿಲ್ಲ; ಸುಧಾಕರ್

ಬೆಂಗಳೂರು,ಜು.೩೧- ರಾಜ್ಯದಲ್ಲಿ ಮಂಗನ ಕಾಯಿಲೆ ಪತ್ತೆಯಾಗಿ ಆತಂಕ ಸೃಷ್ಟಿಸಿದ್ದ ವ್ಯಕ್ತಿಯ ವರದಿ ಬಹಿರಂಗವಾಗಿದ್ದು, ಅದು ಮಂಗನ ಕಾಯಿಲೆ ಅಲ್ಲ, ಚಿಕನ್ ಪಾಕ್ಸ್ ಎಂದು ದೃಢಪಟ್ಟಿದೆ.
ಬೆಂಗಳೂರಿಗೆ ಬಂದಿದ್ದ ಇತಿಯೋಪಿಯಾ ಮೂಲದ ವ್ಯಕ್ತಿಯೊಬ್ಬರಲ್ಲಿ ಮಂಕಿ ಪಾಕ್ಸ್ ರೋಗ ಲಕ್ಷಣಗಳು ಕಂಡು ಬಂದಿತ್ತು. ಇದು ಅತಂಕಕ್ಕೂ ಎಡೆ ಮಾಡಿಕೊಟ್ಟಿತ್ತು. ಈಗ ಪರೀಕ್ಷಾ ವರದಿ ಬಂದಿದ್ದು, ಮಂಕಿಪಾಕ್ಸ್ ಎಂದು ದೃಢಪಟ್ಟಿದ್ದು, ಚಿಕನ್‌ಪಾಕ್ಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಮಂಕಿಪಾಕ್ಸ್ ತಡೆಗಟ್ಟಲು ಸೋಂಕು ಕಂಡು ಬಂದಿರುವ ದೇಶಗಳಿಂದ ಬೆಂಗಳೂರಿಗೆ ಬರುತ್ತಿರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲೇ ತಪಾಸಣೆ ನಡೆಸಲಾಗುತ್ತಿದೆ.
ಜ್ವರ, ಶೀತ, ತಲೆನೋವು, ಸ್ನಾಯು ನೋವು, ಆಯಾಸ ಮತ್ತು ದುಗ್ಧ ರಸಗ್ರಂಥಿಗಳ ಊತ ಮುಂತಾದ ಲಕ್ಷಣಗಳ ಪತ್ತೆಗಾಗಿ ತಪಾಸಣೆ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.