ಸಂಜೆವಾಣಿ ವಾರ್ತೆ
ಕೂಡ್ಲಿಗಿ.ಏ.27 :- ಡಬಲ್ ಇಂಜಿನ್ ಸರ್ಕಾರದ ಅನೇಕ ಅಭಿವೃದ್ಧಿ ಕೆಲಸಗಳ ಸಾಧನೆಗಳೇ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಸಾರಿಗೆ ಸಚಿವ ಶ್ರೀರಾಮುಲು ಭವಿಷ್ಯ ನುಡಿದರು.
ಅವರು ಬುಧವಾರ ತಾಲೂಕಿನ ಆಲೂರು ಗ್ರಾಮದಲ್ಲಿ ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲೋಕೇಶ ವಿ ನಾಯಕ ಅವರ ಪರ ಪ್ರಚಾರದಲ್ಲಿ ತೊಡಗಿ ರೋಡ್ ಶೋ ಮುಗಿದ ನಂತರ ಜನರನ್ನುದ್ದೇಶಿಸಿ ಮಾತನಾಡುತ್ತ ಬಿಜೆಪಿ ಸರಕಾರದ ಕಳೆದ ಐದು ವರ್ಷಗಳ ಅವಧಿಯಲ್ಲಿ ಕೂಡ್ಲಿಗಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸವನ್ನು ಮಾಡಲಾಗಿದೆ. ಅಲ್ಲದೆ, ಈ ಬಾರಿ ಬಿಜೆಪಿ ಪರ ಅಲೆ ಇರುವುದರಿಂದ ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲೋಕೇಶ್ ವಿ.ನಾಯಕ ಅವರ ಗೆಲುವು ನಿಶ್ಚಿತವಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿರುವ ರೀತಿಗೆ ನಾನಾ ದೇಶಗಳು ಬೆರಗಾಗಿವೆ. ರಾಷ್ಟ್ರದ ಹಿತಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಮುಂದಾಗಿರುವುದನ್ನು ಗಮನಿಸಿದ ರಾಜ್ಯದ ಮತದಾರರು ಈ ಬಾರಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ಪಣತೊಟ್ಟಿದ್ದಾರೆ ಎಂದು ತಿಳಿಸಿದರು.
ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲೋಕೇಶ್ ವಿ.ನಾಯಕ ಮಾತನಾಡಿ, ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯದ ವರಿಷ್ಠರು ನನಗೆ ಟಿಕೆಟ್ ನೀಡುವ ಮೂಲಕ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ, ಅತ್ಯಂತ ಹಿಂದುಳಿದ ತಾಲೂಕಿನ ಅಭಿವೃದ್ಧಿಗಾಗಿ ಈ ಬಾರಿ ಬಿಜೆಪಿಗೆ ಮತ ನೀಡುವ ಮೂಲಕ ನನಗೆ ಆಶೀರ್ವದಿಸಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ತಿಪ್ಪೇಸ್ವಾಮಿ, ಮಂಡಲ ಅಧ್ಯಕ್ಷ ಕೆ.ಚನ್ನಪ್ಪ, ಮಾಜಿ ಅಧ್ಯಕ್ಷ ಕೆ.ಎಚ್.ವೀರನಗೌಡ, ಜಿಪಂ ಮಾಜಿ ಅಧ್ಯಕ್ಷರಾದ ಪುಷ್ಪರೇಖಾ ಪದ್ಮನಾಭರೆಡ್ಡಿ, ಜಿ ಪಂ ಮಾಜಿ ಅಧ್ಯಕ್ಷ ಜಿ.ಉಮೇಶ್, ಜಿಪಂ ಮಾಜಿ ಸದಸ್ಯ ರೇವಣ್ಣ, ತಾಪಂ ಮಾಜಿ ಉಪಾಧ್ಯಕ್ಷ ಗುಂಡುಮುಣುಗು ಎಸ್.ಪಿ.ಪ್ರಕಾಶ್, ಕಾನಮಡುಗು ಜಯರಾಜ್, ಮುಖಂಡರಾದ ಆಲೂರು ಕೋಣನ ಮಲ್ಲಿಕಾರ್ಜುನ, ಚಿಕ್ಕಜೋಗಿಹಳ್ಳಿ ಕೆ.ಆರ್.ಸತ್ಯನಾರಾಯಣ ಬಾಬು, ಹುಡೇಂ ಕೆ.ಆರ್.ವೀರೇಶ್‌ಬಾಬು, ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಭೀಮೇಶ್, ಎಸ್‌ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ದುರುಗೇಶ್, ಸಾಣೇಹಳ್ಳಿ ಹನುಮಂತಪ್ಪ, ಮಂಡಲ ಪ್ರಧಾನಕಾರ್ಯದರ್ಶಿ ಮಂಜುನಾಥ, ಮಹಿಳಾ ಮೋರ್ಚಾ ಅಧ್ಯಕ್ಷ ಪವಿತ್ರಾ, ಗ್ರಾಪಂ ಸದಸ್ಯರಾದ ಮೂರ್ತಿ, ಸುಲ್ತಾನ್‌ಪುರ ಇಮಾಮ್, ಪೀರಾಸಾಬ್, ಗ್ರಾಪಂ ಮಾಜಿ ಸದಸ್ಯ ಹೋಟೆಲ್ ಸಿದ್ದಾಪುರ ವೀರೇಶ್‌ಗೌಡ, ಹುಡೇಂ ಸುರೇಶ್ ಸತೀಶ ರವಿರೆಡ್ಡಿ ಇತರರಿದ್ದರು. ನಂತರ, ಮಾಲೂರು, ಕೆಂಚಮಲ್ಲನಹಳ್ಳಿ, ಯಂಬಳಿ, ವಡ್ಡರಹಟ್ಟಿ, ಸುಲ್ತಾನ್‌ಪುರ, ಕಲ್ಲಹಳ್ಳಿ, ಮಾಳೇಹಳ್ಳಿ ಸೇರಿ ಇತರೆಡೆಗಳಲ್ಲಿ ಶ್ರೀರಾಮುಲು ಪ್ರಚಾರ ನಡೆಸಿದರು.