ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ

ಬೆಂಗಳೂರುನ. 14-ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲು ಸರಕಾರ ನಿರ್ಧರಿಸಿದೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ಕ್ಕೆ 50 ಕೋಟಿ ರೂಪಾಯಿಗಳನ್ನು ಒದಗಿಸಲು ನಿರ್ಧರಿಸಲಾಗಿದೆ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಆದೇಶಿಸಿದ್ದಾರೆ.


ಈ ಸಂಬಂಧ ಅವರು ರಾಜ್ಯದ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಯವರಿಗೆ ಟಿಪ್ಪಣಿ ಕಳುಹಿಸಿದ್ದಾರೆ. ರಾಜ್ಯದಲ್ಲಿ ಮರಾಠ ಜನಾಂಗ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು ಮರಾಠ ಸಮುದಾಯ ಆರ್ಥಿಕ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಅಭಿವೃದ್ಧಿಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಅವಶ್ಯಕತೆ ಇದೆ ಅದರಂತೆ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದು ಇದಕ್ಕಾಗಿ 50 ಕೋಟಿ ಒದಗಿಸುವುದಾಗಿ ತಿಳಿಸಿದ್ದಾರೆ.


ಉಪ ಚುನಾವಣೆ ಮೇಲೆ ಕಣ್ಣು

ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮೇಲೆ ಕಣ್ಣಿಟ್ಟು ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ನಿರ್ಧಾರಕ್ಕೆ ಸರ್ಕಾರ ಬಂದಿದೆ ಎಂದು ಹೇಳಲಾಗುತ್ತಿದೆ ಬಸವಕಲ್ಯಾಣ ಕ್ಷೇತ್ರದಲ್ಲಿ ಮರಾಠ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದುಈ ಸಮುದಾಯದ ಮತ ಸೆಳೆಯಲು ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಾಗುತ್ತಿದೆ ಎಂದು ಹೇಳಲಾಗಿದೆ ಈ ಹಿಂದೆ ಶಿರಾ ವಿಧಾನಸಭಾ ಉಪಚುನಾವಣೆ ಮುನ್ನ ಶಿರಾ ಕ್ಷೇತ್ರದಲ್ಲಿ ಹೆಚ್ಚಿರುವ ಕಾಡುಗೊಲ್ಲರ ಮತ ಸೆಳೆಯಲು ರಾಜ್ಯದ ಬಿಜೆಪಿ ಸರ್ಕಾರ ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಸ್ಥಾಪನೆ ನಿರ್ಧಾರ ಪ್ರಕಟಿಸಿತ್ತು. ಈಗ ಬಸವಕಲ್ಯಾಣ ಕ್ಷೇತ್ರದ ಗೆಲುವಿಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಮುಂದಾಗಿದೆ