
ಬೆಂಗಳೂರು, ಆ.೪-ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದರೂ ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಆಗಸ್ಟ್ ೫ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.ರಾಜ್ಯಾದ್ಯಂತ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಿದೆ. ರಾಜ್ಯದ ಬಹುತೇಕ ಭಾಗಗಳು ಶುಷ್ಕ ಗಾಳಿ ಅನುಭವಿಸುತ್ತಿವೆ.ಆದರೆ, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ ೩ ರಿಂದ ಆಗಸ್ಟ್ ೫ ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಹೀಗಾಗಿ ಆಗಸ್ಟ್ ೫ರವರೆಗೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಹಳದಿ ಅಲರ್ಟ್ ಅನ್ವಯವಾಗಲಿದೆ. ಈ ಹಳದಿ ಅಲರ್ಟ್ ಆಗಸ್ಟ್ ೫ರವರೆಗೆ ಇರಲಿದ್ದು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ, ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಭಾವ ಇಳಿಮುಖವಾಗಿದೆ. ಮಳೆಯ ಪ್ರಮಾಣ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದೇ ವೇಳೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ತುಮಕೂರು, ಮೈಸೂರು, ದಾವಣಗೆರೆ ಮೊದಲಾದೆಡೆ ಮಳೆಯ ಪ್ರಮಾಣ ತಗ್ಗಿದೆ.ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಚಿಕ್ಕೋಡಿ, ಬೆಳಗಾವಿ, ಬೀದರ್ ಮತ್ತು ರಾಯಚೂರುಗಳಲ್ಲೂ ಮಳೆಯ ಪ್ರಮಾಣ ತಗ್ಗಿದ್ದು, ಒಣ ಹವೆ ಮುಂದುವರಿದಿದೆ.
ಜೂನ್ ತಿಂಗಳಲ್ಲಿ ಕರಾವಳಿ, ಮಲೆನಾಡು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಮಳೆಯ ಕೊರತೆ ಹೆಚ್ಚಾಗಿದ್ದು, ವಾಡಿಕೆಗಿಂತ ಶೇ.೫೬ರಷ್ಟು ಕಡಿಮೆ ಮಳೆಯಾಗಿದೆ.ಆದರೆ ಇದೇ ಜುಲೈ ತಿಂಗಳಲ್ಲಿ ಭಾರಿ ಮಳೆಯಾಗಿದ್ದು, ವಾಡಿಕೆಗಿಂತ ಶೇ.೨೯ ರಷ್ಟು ಹೆಚ್ಚು ಮಳೆಯಾಗಿದೆ.ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ವಾಡಿಕೆಯಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಆದರೆ, ಸದಾ ಮಳೆಯಿಂದ ಭಾರಿ ಹಾನಿಗೊಳಗಾಗುತ್ತಿದ್ದ ಗುಡ್ಡಗಾಡು ಪ್ರದೇಶಗಳಲ್ಲಿ ಈ ಬಾರಿ ಶೇ.೨೪ರಷ್ಟು ಮಳೆಯ ಪ್ರಮಾಣ ಕಡಿಮೆಯಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ