ರಾಜ್ಯದಲ್ಲಿ ಮೂರು ದಿನ ಮಳೆ

ಬೆಂಗಳೂರು,ಜೂ.೮-ಈ ತಿಂಗಳು ೧೦ ರವರೆಗೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಮತ್ತು ಗುಡುಗು ಚಂಡಮಾರುತ ಸಹ ಇರಲಿದೆ.
ಜೂನ್ ೧೦ ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ ೪೦-೫೦ ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು, ಚಿಕ್ಕಬಳ್ಳಾಪುರ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಯಾದಗಿರಿ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉ.ಕ., ದ.ಕ., ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಜೂನ್ ೧೦ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞರು ಅಧಿಕೃತ ಮಾಹಿತಿ ನೀಡಿದ್ದಾರೆ.
ಹಾರಂಗಿ ಜಲಾಶಯದಲ್ಲಿ ೮.೫ ಟಿಎಂಸಿ ನೀರು ಸಂಗ್ರಹವಾಗಬೇಕಿದೆ. ಆದರೆ ಹೂಳು ತುಂಬಿದ ಹಿನ್ನೆಲೆ ೬.೫, ಟಿಎಂಸಿ ನೀರು ಮಾತ್ರ ಸಂಗ್ರಹವಾಗುತ್ತಿದೆ. ಇದರಿಂದ ಕೆಆರ್‌ಎಸ್ ಅಣೆಕಟ್ಟೆಯ ನೀರು ಪೂರೈಕೆ ಸಾಮರ್ಥ್ಯದ ಮೇಲೂ ಪರಿಣಾಮ ಬೀರಲಿದೆ.
ಕಳೆದ ೨ ಬೇಸಿಗೆಯಲ್ಲಿಯೂ ಹೂಳೆತ್ತುವ ಕಾಮಗಾರಿ ನಡೆದಿಲ್ಲ. ಈ ಬಾರಿಯಾದರೂ ಹೂಳು ತೆರವು ಆಗುತ್ತದೆ ಎಂಬ ನಿರೀಕ್ಷೆಯೂ ಹುಸಿಯಾಗಿರುವುದರಿಂದ ಕುಶಾಲನಗರ ಮಡಿಕೇರಿ ಸುತ್ತಮುತ್ತಲಿನ ಜನರು ಆತಂಕದಲ್ಲಿದ್ದಾರೆ.
ಕರ್ನಾಟಕಕ್ಕೆ ಮುಂಗಾರು ಅಧಿಕೃತವಾಗಿ ಆಗಮಿಸಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಅಧಿಕೃತ ಘೋಷಣೆ ಮಾಡಿದೆ. ದಕ್ಷಿಣ ಕರ್ನಾಟಕದಲ್ಲಿ ಮಳೆಯಾಗಿದ್ದು, ಮುಂಗಾರು ಮಳೆ ಕರಾವಳಿ, ಗುಡ್ಡಗಾಡು ನಾಡು, ಬೆಂಗಳೂರು ಮತ್ತು ದಕ್ಷಿಣ ಕರ್ನಾಟಕ ಭಾಗಗಳಿಗೆ ಮುಂಗಾರು ಮಳೆ ಪ್ರವೇಶಿಸಿದೆ.