
ಬೆಂಗಳೂರು,ಏ.೨೨- ರಾಜ್ಯ ವಿಧಾಸಸಭೆಯ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಡುವೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ನಾಳೆ ಬಾಗಲಕೋಟೆಯಲ್ಲಿ ಜಿಲ್ಲೆಯಲ್ಲಿ ಮತಪ್ರಚಾರ ನಡೆಸಲಿದ್ದಾರೆ.ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮಕ್ಕೆ ಬೆಳಗ್ಗೆ ರಾಹುಲ್ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಕೂಡಲಸಂಗಮಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ ಕೂಡಲಸಂಗಮದ ಸಂಗಮೇಶ್ವರ ದೇವಸ್ಥಾನದ ದರ್ಶನ ಬಳಿಕ ಬಸವಣ್ಣನವರ ಐಕ್ಯಮಂಟಪಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬಸವ ಮಂಟಪದಲ್ಲಿ ನಡೆಯುವ ಬಸವ ಪಂಚಮಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ವಿಜಯಪುರಕ್ಕೆ ತೆರಳಲಿದ್ದಾರೆ.ಮೋದಿ ಉಪನಾಮದ ಹೇಳಿಕೆ ಕುರಿತು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡ ಕೋಲಾರದಿಂದಲೇ ರಾಜ್ಯ ವಿಧಾನಸಭಾ ಚುನಾವಣಾ ರಾಹುಲ್ ಗಾಂಧಿ ಇದೀಗ ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದು ಕಾಂಗ್ರೆಸ್ ನಾಯಕರು ಮತ್ತು ಮುಖಂಡರಲ್ಲಿ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪರ ಅಲೆಯಿದ್ದು ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರ ಇಡಲು ಎಲ್ಲ ರಣತಂತ್ರವನ್ನು ರೂಪಿಸುವಂತೆ ಈಗಾಗಲೇ ರಾಹುಲ್ ಗಾಂಧಿಯವರು ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದಾರೆ.