ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್: ಸಿಎಂ

ಮೈಸೂರು,ಡಿ.22- ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದ್ದ ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಜಾಬ್ ನಿಷೇಧಿಸಿತ್ತು. ಅದನ್ನು ವಾಪಸ್ ತಡೆಯಲು ತಿಳಿಸಿರುವುದಾಗಿ ಮೈಸೂರಿನಲ್ಲಿಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಉಡುಪು ಅವರವರ ವಿವೇಚನೆಗೆ ಬಿಟ್ಟದ್ದು. ಹಿಜಾಬ್ ನಿಷೇಧ ವಾಪಸ್ ಪಡೆಯಲು ಹೇಳಿದ್ದೇನೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವುದು ಬರೀ ಬೋಗಸ್. ಉಡುಪು, ಬಟ್ಟೆ ಜಾತಿ ಆಧಾರದ ಮೇಲೆ ಜನರನ್ನು ಹಾಗೂ ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಕಾಂಗ್ರೆಸ್ ಅಂತಹ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದರು.
ಹಿಜಾಬ್ ನಿಷೇಧದ ಆದೇಶ ವಾಪಸ್ ಪಡೆಯುತ್ತೇವೆ. ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ, ಪರೀಕ್ಷೆ ಬರೆಯಲು ಹೋಗಬಹುದು ಎಂದು ಅವರು ಸ್ಪಷ್ಟಪಡಿಸಿದರು.
ನಾನು ದೋತಿ ಮತ್ತು ಜುಬ್ಬ ಹಾಕಿಕೊಳ್ಳುತ್ತೇನೆ. ನೀನು ಪ್ಯಾಂಟ್-ಶರ್ಟ್ ಹಾಕಿಕೊಂಡರೆ ಹಾಕಿಕೋ, ಇದರಲ್ಲಿ ತಪ್ಪೇನು ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು. ಬಡವರ ಪರ ನಮ್ಮ ಸರ್ಕಾರ ಕೆಲಸ ಮಾಡುತ್ತದೆ. ಇದರಿಂದ ವಿಚಲಿತರಾಗುವ ರಾಜೀ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ಸುಳ್ಳು, ಮೋಸ ಮಾಡುವವರ ಜೊತೆ ಇರಬೇಡಿ ಎಂದು ಜನರಿಗೆ ‌ಕಿವಿ ಮಾತು ಹೇಳಿದರು.
ಡ್ರೆಸ್, ಊಟ‌ ಮಾಡುವುದು ನಿಮಗೆ ಸೇರಿದ್ದು. ನಾನೇಕೆ ನಿಮಗೆ ಅಡ್ಡಿಪಡಿಸಲಿ? ನೀನು ಯಾವ್ ಡ್ರೆಸ್ ಹಾಕಿಕೊಳ್ಳುತ್ತೀಯಾ ಹಾಕಿಕೋ. ನೀನು ಯಾವ ಊಟ ಮಾಡುತ್ತೀಯಾ ಮಾಡು. ನೀನು ಊಟ ಮಾಡುವುದು ನಿನ್ನ ಹಕ್ಕು. ನಾನು ಊಟ ಮಾಡುವುದು ನನ್ನ ಹಕ್ಕು ಎಂದರು. ಹೇಳಿದರು.