ರಾಜ್ಯದಲ್ಲಿ ೩ ದಿನ ಮಳೆ

ಬೆಂಗಳೂರು,ಮೇ.೯-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಮೋಚಾ ಚಂಡಮಾರುತದ ಪರಿಣಾಮ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೊಚಾ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮೋಚಾ ಚಂಡಮಾರುತ ೨೦೨೩ರಲ್ಲಿ ಭಾರತಕ್ಕೆ ಅಪ್ಪಳಿಸುತ್ತಿರುವ ಮೊದಲ ಚಂಡಮಾರುತವಾಗಿದೆ. ಹೀಗಾಗಿ ಈಗಾಗಲೇ ಕೇರಳದ ಪಟ್ಟನಂತಿಟ್ಟ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಮೊಚಾ ಚಂಡಮಾರುತದ ಎಫೆಕ್ಟ್ ಪಶ್ಚಿಮ ಬಂಗಾಳ, ಒಡಿಶಾ ರಾಜ್ಯಗಳಿಗೂ ತಟ್ಟಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.