ಬೆಂಗಳೂರು,ಏ.೨೭-ತಮಿಳುನಾಡಿನಲ್ಲಿ ಚಂಡಮಾರುತ ಸಂಭವಿಸುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮುಂದಿನ ೫ ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಬಿರು ಬೇಸಿಗೆಯಿಂದ ಕಂಗೆಟ್ಟಿರುವ ಜನರಿಗೆ ಮಳೆರಾಯ ತಂಪೆರೆಯಲಿದ್ದಾನೆ.
ತಮಿಳುನಾಡಿನ ದಕ್ಷಿಣ ಕರಾವಳಿ ಭಾಗದಲ್ಲಿ ಸೃಷ್ಟಿಯಾಗಿದ್ದ ಸಮುದ್ರದ ಮೇಲಿನ ಸುಳಿಗಳು ಸೈಕ್ಲೋನ್ ರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಏ.೩೦ರವರೆಗೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿದ ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರ,ಚಾಮರಾಜನಗರ,ಚಿಕ್ಕಬಳ್ಳಾಪುರ,ಚಿತ್ರದುರ್ಗ,ಹಾಸನ,ಕೊಡಗು,ಮೈಸೂರು,ತುಮಕೂರು,ವಿಜಯನಗರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದಲ್ಲದೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣದಿಂದ ಹವಮಾನ ಇಲಾಖೆ ಮುಂಜಾಗೃತ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.